ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಳೆಯಂಗಡಿ: ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ಆದರ್ಶಗಳು ನಮಗೆ ದಾರಿದೀಪ: ಮಿಥುನ್ ರೈ

ಮುಲ್ಕಿ:ಭಾರತದ ಪ್ರಪ್ರಥಮ ಮಹಿಳಾ ಪ್ರಧಾನಿ ಉಕ್ಕಿನ ಮಹಿಳೆ ಇಂದಿರಾಗಾಂಧಿಯವರ ದಿಟ್ಟತನದ ನಿರ್ಧಾರಗಳು ಮತ್ತು ಅವರ ಆಡಳಿತ ವೈಖರಿ ಗಳು ನಮಗೆ ದಾರಿದೀಪ ಎಂದು ಮುಲ್ಕಿ-ಮೂಡಬಿದ್ರೆ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಚುನಾವಣೆ ಉಸ್ತುವಾರಿ ಮಿಥುನ್ ರೈ ನುಡಿದರು.

ಅವರು ಹಳೆಯಂಗಡಿ ಯಲ್ಲಿರುವ ಕಾಂಗ್ರೆಸ್ ಕಚೇರಿಯಲ್ಲಿ ಮುಲ್ಕಿ ಬ್ಲಾಕ್ ಕಾಂಗ್ರೆಸ್ ಸಮಿತಿ, ಮಹಿಳಾ ಕಾಂಗ್ರೆಸ್ ಸಮಿತಿ ಮತ್ತು ಯುವ ಕಾಂಗ್ರೆಸ್ ಸಮಿತಿಯ ಆಶ್ರಯದಲ್ಲಿ ನಡೆದ ಇಂದಿರಾಗಾಂಧಿ ಸ್ಮರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನುಮುಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೋಹನ್ ಕೋಟ್ಯಾನ್ ವಹಿಸಿದ್ದರು.

ಕೆಪಿಸಿಸಿ ಕೋಆರ್ಡಿನೇಟರ್ ವಸಂತ ಬರ್ನಾಡ್ , ಯುವ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಪೂಜಾರ, ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಪದ್ಮಾವತಿ ಶೆಟ್ಟಿ, ರಾಜ್ಯ ಹಿಂದುಳಿದ ವರ್ಗಗಳ ಕಾರ್ಯದರ್ಶಿ ಪ್ರವೀಣ್ ಕುಮಾರ್ ಬೊಳ್ಳೂರು ಪ್ರಜಾಪ್ರತಿನಿಧಿ ಸಮಿತಿ ಅಧ್ಯಕ್ಷರುಗಳಾದ ಜನಾರ್ದನ ಬಂಗೇರ, ಧನ್ರಾಜ್ ಕೋಟ್ಯಾನ್ ಸಸಿಹಿತ್ಲು, ಧರ್ಮಾನಂದ ಶೆಟ್ಟಿಗಾರ್ ಮತ್ತಿತರರು ಉಪಸ್ಥಿತರಿದ್ದರು

Edited By : PublicNext Desk
Kshetra Samachara

Kshetra Samachara

31/10/2021 03:23 pm

Cinque Terre

1.48 K

Cinque Terre

0

ಸಂಬಂಧಿತ ಸುದ್ದಿ