ಮುಲ್ಕಿ: ಮುಲ್ಕಿ ಬ್ಲಾಕ್ ಮಹಿಳಾ ಕಾಂಗ್ರೆಸ್ ಸಮಿತಿ ವತಿಯಿಂದ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮದಿನದ ಅಂಗವಾಗಿ ಮುಲ್ಕಿ ಹೋಬಳಿ ಮಟ್ಟದ ಅಂತರ್ ಶಾಲೆ ಹಾಗೂ ಕಾಲೇಜಿನ ಮಕ್ಕಳ ಜಾನಪದ ನೃತ್ಯ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣಾ ಹಾಗೂ ಸಾಧಕರಿಗೆ ಗೌರವ ಕಾರ್ಯಕ್ರಮ ಹಳೆಯಂಗಡಿಯ ಹರಿ ಓಂ ಸಭಾಭವನದಲ್ಲಿ ಶುಕ್ರವಾರ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾಜಿ ಸಚಿವ ಅಭಯಚಂದ್ರ ಜೈನ್ ಮಾತನಾಡಿ ಭಾರತದ ಪ್ರಧಾನಿಯಾಗಿ ದಿ. ಇಂದಿರಾಗಾಂಧಿಯವರ ಸಾಧನೆಗಳು ಅನುಕರಣೀಯ, ಅವರು ಬಡವರ ಶೋಷಿತರ ದೀನದಲಿತರ ಆಶಾಕಿರಣವಾಗಿದ್ದರು ಎಂದರು.
ವೇದಿಕೆಯಲ್ಲಿ ಮುಖ್ಯಅತಿಥಿಗಳಾಗಿ ಯುವ ಕಾಂಗ್ರೆಸ್ ನಾಯಕ ಮಿಥುನ್ ರೈ, ಮುಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೋಹನ್ ಕೋಟ್ಯಾನ್, ಕೆಪಿಸಿಸಿ ಕೋಆರ್ಡಿನೇಟರ್ ವಸಂತ್ ಬೆರ್ನಾಡ್, ಯುವ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಪೂಜಾರ, ಮುಲ್ಕಿ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪದ್ಮಾವತಿ ಶೆಟ್ಟಿ, ಮುಲ್ಕಿ ನಪಂ ಸದಸ್ಯ ಪುತ್ತುಬಾವ, ಯೋಗೀಶ್ ಕೋಟ್ಯಾನ್, ಕಾಂಗ್ರೆಸ್ ನಾಯಕ ಅಶ್ವಿನ್ ಆಳ್ವ, ಅನಿತಾ ಅರಾಹ್ನ ಮತ್ತಿತರರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಜನಪದ ನೃತ್ಯ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು
ಸಾಧಕರ ನೆಲೆಯಲ್ಲಿ ಮಿಸ್ ಇಂಡಿಯಾ ಪ್ರಶಸ್ತಿ ವಿಜೇತೆ ಪ್ರತಿಭಾ ಹಾಗೂ ಸಾಮಾಜಿಕ ಕಾರ್ಯಕರ್ತೆ ನಂದಾ ರವರನ್ನು ಗೌರವಿಸಲಾಯಿತು.
Kshetra Samachara
19/11/2021 07:15 pm