ಮುಲ್ಕಿ:ಅವಿಭಾಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪಂಚಾಯತ್ ರಾಜ್ ವ್ಯವಸ್ಥೆ ಇನ್ನಷ್ಟು ಬಲಿಷ್ಠಗೊಳ್ಳಬೇಕು. ಸ್ಥಳೀಯ ಆಡಳಿತ ಎದುರಿಸುತ್ತಿರುವ ಹಲವಾರು ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಲ್ಲಿ ಶ್ರಮಿಸುತ್ತೇನೆ. ಕಾಂಗ್ರೆಸ್ ಪಕ್ಷ ನೀಡಿದ ಈ ಅವಕಾಶಕ್ಕಾಗಿ ತಮ್ಮೆಲ್ಲರ ಸಹಕಾರ ಅಗತ್ಯವೆಂದು ದ.ಕ. ಜಿಲ್ಲೆ ಮತ್ತು ಉಡುಪಿ ಜಿಲ್ಲೆಯ ಕಾಂಗ್ರೆಸ್ ಪಕ್ಷದ ವಿಧಾನ ಪರಿಷತ್ ಅಭ್ಯರ್ಥಿ ಮಂಜುನಾಥ್ ಭಂಢಾರಿ ಹೇಳಿದರು.
ಅವರು ಮುಲ್ಕಿ ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯ ನಗರ ಪಂಚಾಯತ್ ಮತ್ತು ಗ್ರಾಮ ಪಂಚಾಯತ್ ವ್ಯಾಪ್ತಿಯ ಪಂಚಾಯತ್ ಸದಸ್ಯರ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.
ಮಾಜಿ ಸಚಿವರಾದ ಕೆ ಅಭಯಚಂದ್ರ ,ಮಾಜಿ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ಯುವ ಕಾಂಗ್ರೆಸ್ ನಾಯಕ ಮಿಥುನ್ ರೈ, ಮಾತನಾಡಿದರು.
ವೇದಿಕೆಯಲ್ಲಿ ಮೂಲ್ಕಿ ಬ್ಲಾಕ್ ಕಾಂಗ್ರೆಸ್ ನ ಅಧ್ಯಕ್ಷ ಮೋಹನ್ ಪಿ ಕೋಟ್ಯಾನ್, ಕೆಪಿಸಿಸಿ ಕೋಆರ್ಡಿನೇಟರ್ ಎಚ್. ವಸಂತ್ ಬೆರ್ನಾರ್ಡ್, ಕೆಪಿಸಿಸಿ ಕೋಆರ್ಡಿನೇಟರ್ ನವೀನ್ ಚಂದ್ರ ಶೆಟ್ಟಿ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಲುಕ್ಮನ್, ಕಾರ್ಪೋರೇಟರ್‌ಗಳಾದ ಪ್ರವೀಣ್ ಚಂದ್ರ ಆಳ್ವ, ಅನಿಲ್ ಪೂಜಾರಿ, ಗೌತಮ್ ಜೈನ್, ಯುವ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಪೂಜಾರ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪದ್ಮಾವತಿ ಶೆಟ್ಟಿ, ಡಿಸಿಸಿ ಸದ್ಯರಾದ ಉಲ್ಲಾಸ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಕಂಬಾರ್ ಉಪಸ್ಥಿತರಿದ್ದರು.
Kshetra Samachara
27/11/2021 05:30 pm