ಮುಲ್ಕಿ: ಮುಲ್ಕಿ ನಗರ ಪಂಚಾಯತ್ ಆಶ್ರಯದಲ್ಲಿ 73 ನೇ ಗಣರಾಜ್ಯೋತ್ಸವ ಕಾರ್ಯಕ್ರಮ ಕಾರ್ನಾಡ್ ಗಾಂಧಿ ಮೈದಾನದಲ್ಲಿ ನಡೆಯಿತು
ಮುಲ್ಕಿ-ಮೂಡಬಿದ್ರೆ ಶಾಸಕ ಉಮಾನಾಥ ಕೋಟ್ಯಾನ್ ಧ್ವಜಾರೋಹಣ ನೆರವೇರಿಸಿ ಮಾತನಾಡಿ ಕಳೆದ ಮೂರು ವರ್ಷ ಹತ್ತು ತಿಂಗಳಲ್ಲಿ ಮುಲ್ಕಿ-ಮೂಡಬಿದ್ರೆ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳು ನಡೆದಿದ್ದು ಕಿನ್ನಿಗೋಳಿ ಹಾಗೂ ಬಜಪೆಯ ಪಟ್ಟಣ ಪಂಚಾಯತ್ ಗಿ ಅಭಿವೃದ್ಧಿಯ ಹಿತದೃಷ್ಟಿಯಿಂದ ಮೇಲ್ದರ್ಜೆಗೆ ಏರಿಸಲಾಗಿದೆ.
ಮುಲ್ಕಿಯಲ್ಲಿ ಶೀಘ್ರ ಮಿನಿ ವಿಧಾನಸೌಧಕ್ಕೆ 10 ಕೋಟಿ ಮಂಜೂರಾಗಿದ್ದು ಶೀಘ್ರ ಅನುಷ್ಠಾನಗೊಳ್ಳಲಿದೆ. ಮುಲ್ಕಿ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಎರಡು ಕೋಟಿ ವೆಚ್ಚದಲ್ಲಿ ಪ್ರವಾಸಿ ಮಂದಿರ, ಸಸಿಹಿತ್ಲು ಕಡಲು ಕೊರೆತಕ್ಕೆ 4.5 ಕೋಟಿ, ಹಾಗೂ ಸಸಿಹಿತ್ಲು ಮುಂಡಾ ಬೀಚ್ ನಲ್ಲಿ ಪ್ರವಾಸೋದ್ಯಮವನ್ನು ಬಲಪಡಿಸಲು ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ಮುಲ್ಕಿ ತಾಲೂಕು ವ್ಯಾಪ್ತಿಯಲ್ಲಿ ಮಡಿವಾಳ ಕೆರೆ, ಪಾವಂಜೆ ದೇವಸ್ಥಾನದ ಕೆರೆಯನ್ನು ಅಭಿವೃದ್ಧಿಪಡಿಸಲು ಅನುದಾನ ಬಿಡುಗಡೆಯಾಗಿದೆ ಎಂದರು. ಮುಲ್ಕಿಗೆ ಶೀಘ್ರ ಎ ಗ್ರೇಡ್ ತಹಶಿಲ್ದಾರ್ ನೇಮಕ ಮಾಡಲಾಗುವುದು ಹಾಗೂ ಜನರ ಆಶೋತ್ತರಗಳನ್ನು ಈಡೇರಿಸಲು ಬದ್ಧನಾಗಿದ್ದೇನೆ ಎಂದರು.
ಮುಲ್ಕಿ ನ ಪಂ ಅಧ್ಯಕ್ಷ ಸುಭಾಷ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಮುಲ್ಕಿ ನಪಂ ಉಪಾಧ್ಯಕ್ಷ ಸತೀಶ್ ಅಂಚನ್, ತಹಶಿಲ್ದಾರ್ ಕಮಲಮ್ಮ, ಮುಖ್ಯಾಧಿಕಾರಿ ಚಂದ್ರ ಪೂಜಾರಿ, ಮಾಜೀ ಮುಖ್ಯಾಧಿಕಾರಿ ಡಾ.ಹರಿಶ್ಚಂದ್ರ ಸಾಲ್ಯಾನ್, ಕಂದಾಯ ಇಲಾಖೆ ಅಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಮುಲ್ಕಿ ಪೊಲೀಸ್ ಇನ್ಸ್ಪೆಕ್ಟರ್ ಕುಸುಮಧರ ಹಾಗೂ ಎಸ್ಸೈ ವಿನಾಯಕ ತೋರಗಲ್ ನೇತೃತ್ವದಲ್ಲಿ ಪೊಲೀಸ್ ಇಲಾಖೆ ಮತ್ತು ಗೃಹರಕ್ಷಕ ದಳದ ಸದಸ್ಯರಿಂದ ಆಕರ್ಷಕ ಪಥಸಂಚಲನ ನಡೆಯಿತು.
ಗಣರಾಜ್ಯೋತ್ಸವ ಮತ್ತು ಸ್ವಚ್ಛ ಸರ್ವೇಕ್ಷಣೆ 2022 ಪ್ರಯುಕ್ತ ನಡೆದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ಪೌರಕಾರ್ಮಿಕರಿಗೆ ಆರೋಗ್ಯ ವಿಮೆ ಕಾರ್ಡ್ ಆರೋಗ್ಯ ಸುರಕ್ಷಾ ಧಿರಿಸು ವಿತರಿಸಲಾಯಿತು. ಶೇಕಡ 24.10,7.25 ಮತ್ತು ಶೇ5 ನಿಧಿಯಡಿ ಸೌಲಭ್ಯ ವಿತರಣೆ, ಕಂದಾಯ ಇಲಾಖೆಯಿಂದ ಹಕ್ಕುಪತ್ರ ವಿತರಣೆ ಕಾರ್ಯಕ್ರಮ ನಡೆಯಿತು. ವಕೀಲ ಭಾಸ್ಕರ ಹೆಗ್ದೆ ನಿರೂಪಿಸಿದರು, ಕಂದಾಯ ಅಧಿಕಾರಿ ಅಶೋಕ್ ಧನ್ಯವಾದ ಅರ್ಪಿಸಿದರು.
Kshetra Samachara
26/01/2022 01:54 pm