ಮೂಡಬಿದ್ರೆ: ಭಾರತೀಯ ಜನತಾ ಪಾರ್ಟಿ ಶಿರ್ತಾಡಿ ಮಹಾಶಕ್ತಿ ಕೇಂದ್ರ ವ್ಯಾಪ್ತಿಯ ಬೆಳುವಾಯಿ ಪಂಚಾಯತ್ ಮಟ್ಟದ ಕಾರ್ಯಕರ್ತರ ಸಂಘಟನಾತ್ಮಕ ಸಭೆಯಲ್ಲಿ ಶಾಸಕ ಉಮಾನಾಥ್ ಕೋಟ್ಯಾನ್ ಅವರು ಭಾಗವಹಿಸಿ ಪಕ್ಷ ಸಂಘಟನೆಯ ಬಗ್ಗೆ ಚರ್ಚಿಸಿದರು. ಈ ಸಂದರ್ಭ ಅವರು ಮಾತನಾಡಿ ಮುಲ್ಕಿ ಮೂಡಬಿದ್ರೆ ವಿಧಾನಸಭಾ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳು ಆಗಿದ್ದು ಕಾರ್ಯಕರ್ತರು ಪ್ರತಿ ಮನೆಗೆ ತೆರಳಿ ಸರಕಾರದ ಅಭಿವೃದ್ಧಿ ಕಾರ್ಯಗಳ ಬಗ್ಗೆ ತಿಳಿಸಬೇಕು. ಕಾರ್ಯಕರ್ತರು ಪಕ್ಷದ ಆಸ್ತಿಯಾಗಿದ್ದು ಪಕ್ಷ ಸಂಘಟನೆಗೆ ಒತ್ತು ನೀಡಲು ಮನವಿ ಮಾಡಿದರು.
ಸಭೆಯಲ್ಲಿ ಮಂಡಲಾಧ್ಯಕ್ಷ ಸುನಿಲ್ ಆಳ್ವ, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಗೋಪಾಲ್ ಶೆಟ್ಟಿಗಾರ್, ಕೇಶವ ಕರ್ಕೇರ, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸುಕೇಶ್ ಶೆಟ್ಟಿ, ಶಕ್ತಿಕೇಂದ್ರ ಕಾರ್ಯದರ್ಶಿ ದಿವ್ಯವರ್ಮ ಬಲ್ಲಾಳ್ ಮತ್ತು ಬೂತ್ ಅಧ್ಯಕ್ಷರುಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.
Kshetra Samachara
05/04/2022 01:22 pm