ಮೂಡಬಿದ್ರೆ:ಭಾರತೀಯ ಜನತಾ ಪಾರ್ಟಿ ಪುತ್ತಿಗೆ ಮಹಾಶಕ್ತಿಕೇಂದ್ರ ವ್ಯಾಪ್ತಿಯ ಇರುವೈಲು ಪಂಚಾಯತ್ ಮಟ್ಟದ ಕಾರ್ಯಕರ್ತರ ಸಂಘಟನಾತ್ಮಕ ಸಭೆಯಲ್ಲಿ ಶಾಸಕ ಉಮಾನಾಥ್ ಕೋಟ್ಯಾನ್ ಅವರು ಭಾಗವಹಿಸಿ ಪಕ್ಷ ಸಂಘಟನೆಯ ಬಗ್ಗೆ ಚರ್ಚಿಸಿ ಕಾರ್ಯಕರ್ತರ ಅಹವಾಲುಗಳನ್ನ ಆಲಿಸಿದರು.
ಈ ಸಂದರ್ಭ ಅವರು ಮಾತನಾಡಿ ಕ್ಷೇತ್ರದಲ್ಲಿ ಸರಕಾರದ ಮೂಲಕ ನಡೆದ ಅನೇಕ ಅಭಿವೃದ್ಧಿ ಕಾರ್ಯಗಳ ಬಗ್ಗೆ ಕಾರ್ಯಕರ್ತರು ಜನರಿಗೆ ಮಾಹಿತಿ ನೀಡಬೇಕು ಎಂದು ವಿನಂತಿಸಿದರು.
ಮಂಡಲಾಧ್ಯಕ್ಷ ಸುನಿಲ್ ಆಳ್ವ, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಗೋಪಾಲ್ ಶೆಟ್ಟಿಗಾರ್ , ಕೇಶವ ಕರ್ಕೇರ, ಮಂಡಲ ಉಪಾಧ್ಯಕ್ಷರಾದ ಅಜಯ್ ರೈ, ಶಕ್ತಿಕೇಂದ್ರ ಅಧ್ಯಕ್ಷ ಕಿಶೋರ್ ಕುಮಾರ್, ಕಾರ್ಯದರ್ಶಿ ನಾಗೇಶ್ ಅಮೀನ್, ಅಶೋಕ್ ಶೆಟ್ಟಿ ತೋಡಾರ್ ಮತ್ತು ಸ್ಥಳೀಯ ಬೂತ್ ಅಧ್ಯಕ್ಷರುಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.
Kshetra Samachara
09/04/2022 07:55 am