ಮುಲ್ಕಿ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡ ಮಿಥುನ್ ರೈ ಅವರನ್ನು ಮುಲ್ಕಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಗೌರವಿಸಲಾಯಿತು.
ಈ ಸಂದರ್ಭ ಮಿಥುನ್ ರೈ ಮಾತನಾಡಿ ಕಾರ್ಯಕರ್ತರು ಪಕ್ಷದ ಆಸ್ತಿಯಾಗಿದ್ದು ಪಕ್ಷ ಸಂಘಟನೆ ಮೂಲಕ ಕಾಂಗ್ರೆಸ್ಸನ್ನು ಬಲಿಷ್ಟಗೊಳಿಸಲು ಸಹಕಾರ ಬೇಕು ಎಂದರು.
ಈ ಸಂದರ್ಭ ಕೆಪಿಸಿಸಿ ಕೋ ಆರ್ಡಿನೇಟರ್ ವಸಂತ ಬೆರ್ನಾಡ್, ಮುಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೋಹನ್ ಕೋಟ್ಯಾನ್, ಪ್ರಧಾನ ಕಾರ್ಯದರ್ಶಿ ಮಂಜುನಾಥ ಕಂಬಾರ, ಜಿಲ್ಲಾ ಕಾಂಗ್ರೆಸ್ ಸಮಿತಿ ಸದಸ್ಯ ಪುತ್ತುಬಾವ, ಹಾಗೂ ಯುವ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಪೂಜಾರ್ ಉಪಸ್ಥಿತರಿದ್ದರು.
Kshetra Samachara
11/04/2022 04:37 pm