ಮುಲ್ಕಿ:ಭಾರತೀಯ ಜನತಾ ಪಾರ್ಟಿ ಹಳೆಯಂಗಡಿ ಮಹಾಶಕ್ತಿಕೇಂದ್ರ ವ್ಯಾಪ್ತಿಯ ಪಡುಪಣಂಬೂರು ಪಂಚಾಯತ್ ಮಟ್ಟದ ಕಾರ್ಯಕರ್ತರ ಸಂಘಟನಾತ್ಮಕ ಸಭೆಯಲ್ಲಿ ಶಾಸಕ ಉಮಾನಾಥ್ ಕೋಟ್ಯಾನ್ ಅವರು ಭಾಗವಹಿಸಿ ಪಕ್ಷ ಸಂಘಟನೆಯ ಬಗ್ಗೆ ಚರ್ಚಿಸಿ ಕಾರ್ಯಕರ್ತರ ಅಹವಾಲುಗಳನ್ನು ಆಲಿಸಿ ಮಾತನಾಡಿ ಕ್ಷೇತ್ರದಲ್ಲಿ ನಡೆದ ಅಭಿವೃದ್ಧಿ ಕಾರ್ಯಗಳ ಬಗ್ಗೆ ನಾಗರಿಕರಿಗೆ ಮಾಹಿತಿ ಹಾಗೂ ಪಕ್ಷ ಸಂಘಟನೆಗೆ ಒತ್ತು ನೀಡಬೇಕು ಎಂದು ಮನವಿ ಮಾಡಿದರು.
ಈ ಸಂಧರ್ಭ ಮಂಡಲಾಧ್ಯಕ್ಷ ಸುನಿಲ್ ಆಳ್ವ, ಪ್ರಧಾನ ಕಾರ್ಯದರ್ಶಿ ಗೋಪಾಲ್ ಶೆಟ್ಟಿಗಾರ್, ಕೇಶವ ಕರ್ಕೇರ, ಮಹಾಶಕ್ತಿಕೇಂದ್ರ ಅಧ್ಯಕ್ಷ ಜೀವನ್ ಪ್ರಕಾಶ್, ಕಾರ್ಯದರ್ಶಿ ದಿನೇಶ್ ಪುತ್ರನ್, ಪಡುಪಣಂಬೂರು ಗ್ರಾಪಂ ಉಪಾಧ್ಯಕ್ಷೆ ಕುಸುಮ ಚಂದ್ರಶೇಖರ್ ಮತ್ತು ಸ್ಥಳೀಯ ಜನಪ್ರತಿನಿಧಿಗಳು, ಬೂತ್ ಅಧ್ಯಕ್ಷರುಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.
Kshetra Samachara
15/04/2022 06:25 pm