ಮುಲ್ಕಿ:ಭಾರತೀಯ ಜನತಾ ಪಾರ್ಟಿ ಹಳೆಯಂಗಡಿ ಮಹಾಶಕ್ತಿಕೇಂದ್ರ ವ್ಯಾಪ್ತಿಯ ಅತಿಕಾರಿಬೆಟ್ಟು ಪಂಚಾಯತ್ ಮಟ್ಟದ ಕಾರ್ಯಕರ್ತರ ಸಂಘಟನಾತ್ಮಕ ಸಭೆಯಲ್ಲಿ ಶಾಸಕ ಉಮಾನಾಥ್ ಕೋಟ್ಯಾನ್ ಭಾಗವಹಿಸಿ ಪಕ್ಷ ಸಂಘಟನೆಯ ಬಗ್ಗೆ ಚರ್ಚಿಸಿ ಕಾರ್ಯಕರ್ತರ ಅಹವಾಲುಗಳನ್ನು ಆಲಿಸಿ ಮಾತನಾಡಿ ಗ್ರಾಮ ಗ್ರಾಮಗಳಲ್ಲಿ ಪಕ್ಷ ಸಂಘಟನೆಗೆ ಮತ್ತಷ್ಟು ಪ್ರಾಶಸ್ತ್ಯ ನೀಡಬೇಕು ಎಂದರು.
ಈ ಸಂಧರ್ಭ ಮಂಡಲಾಧ್ಯಕ್ಷ ಸುನಿಲ್ ಆಳ್ವ, ಮಂಡಲ ಪ್ರಧಾನ ಕಾರ್ಯದರ್ಶಿ ಗೋಪಾಲ್ ಶೆಟ್ಟಿಗಾರ್, ಕೇಶವ ಕರ್ಕೇರ, ಮಹಾಶಕ್ತಿಕೇಂದ್ರ ಅಧ್ಯಕ್ಷರಾದ ಜೀವನ್ ಪ್ರಕಾಶ್, ಕಾರ್ಯದರ್ಶಿ ದಿನೇಶ್ ಪುತ್ರನ್, ಮಾಜಿ ತಾಪಂ ಸದಸ್ಯ ಶರತ್ ಕುಬೆವೂರು, ಮನೋಹರ ಕೋಟ್ಯಾನ್ , ಗಂಗಾಧರ ಶೆಟ್ಟಿ,ಮತ್ತು ಸ್ಥಳೀಯ ಜನಪ್ರತಿನಿಧಿಗಳು, ಬೂತ್ ಅಧ್ಯಕ್ಷರುಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.
Kshetra Samachara
16/04/2022 07:42 am