ಮುಲ್ಕಿ:ಭಾರತೀಯ ಜನತಾ ಪಾರ್ಟಿ ಹಳೆಯಂಗಡಿ ಮಹಾಶಕ್ತಿ ಕೇಂದ್ರ ವ್ಯಾಪ್ತಿಯ ಐಕಳ ಪಂಚಾಯತ್ ಮಟ್ಟದ ಕಾರ್ಯಕರ್ತರ ಸಂಘಟನಾತ್ಮಕ ಸಭೆಯಲ್ಲಿ ಶಾಸಕ ಉಮಾನಾಥ್ ಕೋಟ್ಯಾನ್ ಭಾಗವಹಿಸಿ ಪಕ್ಷ ಸಂಘಟನೆಯ ಬಗ್ಗೆ ಚರ್ಚಿಸಿ ಕಾರ್ಯಕರ್ತರ ಅಹವಾಲುಗಳನ್ನು ಆಲಿಸಿ ಮಾತನಾಡಿ ಕ್ಷೇತ್ರದಲ್ಲಿ ಅನೇಕ ಅಭಿವೃದ್ಧಿ ಕಾರ್ಯಗಳನ್ನು ನಡೆದಿದ್ದು ಸಂಘಟನೆ ಮೂಲಕ ಬಲಪಡಿಸಿ ಎಂದರು.
ಮಂಡಲಾಧ್ಯಕ್ಷ ಸುನಿಲ್ ಆಳ್ವ, ಪ್ರಧಾನ ಕಾರ್ಯದರ್ಶಿ ಗೋಪಾಲ್ ಶೆಟ್ಟಿಗಾರ್, ಕೇಶವ ಕರ್ಕೇರ, ಮಹಾಶಕ್ತಿಕೇಂದ್ರ ಅಧ್ಯಕ್ಷ ಜೀವನ್ ಪ್ರಕಾಶ್, ಕಾರ್ಯದರ್ಶಿ ದಿನೇಶ್ ಪುತ್ರನ್, ಮತ್ತು ಸ್ಥಳೀಯ ಜನಪ್ರತಿನಿಧಿಗಳು, ಬೂತ್ ಅಧ್ಯಕ್ಷರುಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.
Kshetra Samachara
16/04/2022 12:13 pm