ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸುರತ್ಕಲ್: ಬಾಳ ಕಾಂಗ್ರೆಸ್ ಬೆಂಬಲಿತ ಗ್ರಾ ಪಂ ಸದಸ್ಯೆ ಬಿಜೆಪಿ ಸೇರ್ಪಡೆ

ಸುರತ್ಕಲ್: ಸುರತ್ಕಲ್ ಸಮೀಪದ ಬಾಳ ಗ್ರಾಮ ಪಂಚಾಯತ್ ಕಾಂಗ್ರೆಸ್ ಬೆಂಬಲಿತ ಸದಸ್ಯೆ ಲಕ್ಷ್ಮಿ ಕಳವಾರು ಶಾಸಕ ಉಮಾನಾಥ್ ಕೋಟ್ಯಾನ್ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಗೊಂಡರು.

ಈ ಸಂದರ್ಭ ಅವರು ಮಾತನಾಡಿ ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಮತ್ತು ರಾಜ್ಯ ಬಿಜೆಪಿ ಸರ್ಕಾರದ ಜನಪರ ಯೋಜನೆಗಳನ್ನು ಹಾಗೂ ಶಾಸಕ ಉಮಾನಾಥ ಕೋಟ್ಯಾನ್ ರವರ ಅಭಿವೃದ್ಧಿಪರ ಕೆಲಸಗಳನ್ನು ಮೆಚ್ಚಿ ಬಿಜೆಪಿ ಪಕ್ಷ ಸೇರಿರುವುದಾಗಿ ತಿಳಿಸಿದರು

ಈ ಸಂದರ್ಭ ಮಂಡಲಾಧ್ಯಕ್ಷ ಸುನಿಲ್ ಆಳ್ವ ಮತ್ತು ಬಿಜೆಪಿ ಪದಾಧಿಕಾರಿಗಳು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

16/04/2022 03:13 pm

Cinque Terre

1.95 K

Cinque Terre

0

ಸಂಬಂಧಿತ ಸುದ್ದಿ