ಪೆರ್ಮುದೆ:ಭಾರತೀಯ ಜನತಾ ಪಾರ್ಟಿ ಪೆರ್ಮುದೆ ಮಹಾಶಕ್ತಿಕೇಂದ್ರ ವ್ಯಾಪ್ತಿಯ ಪೆರ್ಮುದೆ ಪಂಚಾಯತ್ ಮಟ್ಟದ ಕಾರ್ಯಕರ್ತರ ಸಂಘಟನಾತ್ಮಕ ಸಭೆಯಲ್ಲಿ ಮಾನ್ಯ ಶಾಸಕರಾದ ಶ್ರೀ ಉಮಾನಾಥ್ ಕೋಟ್ಯಾನ್ ಅವರು ಭಾಗವಹಿಸಿ ಪಕ್ಷ ಸಂಘಟನೆಯ ಬಗ್ಗೆ ಚರ್ಚಿಸಿ ಕಾರ್ಯಕರ್ತರ ಅಹವಾಲುಗಳನ್ನು ಆಲಿಸಿದರು. ಈ ಸಂದರ್ಭ ಅವರು ಮಾತನಾಡಿ ಕಳೆದ ಸರಕಾರದ ಆಡಳಿತದ ಅವಧಿಯಲ್ಲಿ ಅನೇಕ ಅಭಿವೃದ್ಧಿ ಕಾರ್ಯಗಳು ನಡೆದಿದ್ದು ಸಂಘಟನಾತ್ಮಕ ರೀತಿಯಲ್ಲಿ ಕೆಲಸ ಮಾಡುವ ಮೂಲಕ ಕಾರ್ಯಕರ್ತರು ಸರಕಾರದ ಜತೆ ಕೈಜೋಡಿಸಬೇಕು ಎಂದರು.
ಈ ಸಂಧರ್ಭ ಮಂಡಲಾಧ್ಯಕ್ಷ ಸುನಿಲ್ ಆಳ್ವ, ಮಂಡಲ ಪ್ರಧಾನ ಕಾರ್ಯದರ್ಶಿ ಗೋಪಾಲ್ ಶೆಟ್ಟಿಗಾರ್, ಕೇಶವ ಕರ್ಕೇರ, ಮಹಾಶಕ್ತಿಕೇಂದ್ರ ಅಧ್ಯಕ್ಷ ಹರೀಶ್ ಮೂಡುಶೆಡ್ಡೆ, ಕಾರ್ಯದರ್ಶಿ ಗಜೇಂದ್ರ ಎಸ್.ಬಿ, ಮತ್ತು ಸ್ಥಳೀಯ ಜನಪ್ರತಿನಿಧಿಗಳು, ಬೂತ್ ಅಧ್ಯಕ್ಷರುಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.
Kshetra Samachara
16/04/2022 04:48 pm