ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೂಡಬಿದ್ರೆ: "ಪಕ್ಷ ಸಂಘಟನೆ ಮೂಲಕ ಸರಕಾರದ ಜನಪರ ಕಾರ್ಯಕ್ರಮಗಳನ್ನು ತಿಳಿಸಿ": ಉಮಾನಾಥ್

ಮೂಡಬಿದ್ರೆ;ಭಾರತೀಯ ಜನತಾ ಪಾರ್ಟಿ ಹಿಂದುಳಿದ ವರ್ಗಗಳ ಮೋರ್ಚಾ ಮುಲ್ಕಿ-ಮೂಡಬಿದ್ರೆ ಮಂಡಲದ ವಿಶೇಷ ಸಭೆಯನ್ನು ಭಾರತೀಯ ಜನತಾ ಪಾರ್ಟಿ ಕಚೇರಿ ವಿದ್ಯಾಗಿರಿಯಲ್ಲಿ ನಡೆಯಿತು.

ಮುಲ್ಕಿ ಮೂಡಬಿದ್ರೆ ಶಾಸಕ ಉಮಾನಾಥ್ ಎ. ಕೋಟ್ಯಾನ್ ಕಾರ್ಯಕ್ರಮವನ್ನು ಉದ್ಘಾಟಿಸಿ ಪಕ್ಷ ಸಂಘಟನೆ ಮೂಲಕ ಸರಕಾರದ ಜನಪರ ಕಾರ್ಯಕ್ರಮಗಳನ್ನು ಮತದಾರರಿಗೆ ತಿಳಿಸುವ ಕೆಲಸವನ್ನು ಕಾರ್ಯಕರ್ತರು ಮಾಡಬೇಕು ಎಂದರು. ಓಬಿಸಿ ಮೋರ್ಚಾದ ಅಧ್ಯಕ್ಷ ರಾಜೇಶ್ ಅಮೀನ್ ಅಧ್ಯಕ್ಷತೆ ವಹಿಸಿದ್ದರು.

ವಿಶೇಷ ಸಭೆಯಲ್ಲಿ ರಾಜ್ಯದ ಓಬಿಸಿ ಪ್ರಧಾನ ಕಾರ್ಯದರ್ಶಿ ವಿವೇಕಾನಂದ ಡಬ್ಬಿ, ರಾಜ್ಯ ಒಬಿಸಿ ಕಾರ್ಯದರ್ಶಿ ವಿಠಲ ಪೂಜಾರಿ, ಜಿಲ್ಲಾಧ್ಯಕ್ಷ ಆರ್ ಸಿ ನಾರಾಯಣ್, ಪ್ರಧಾನ ಕಾರ್ಯದರ್ಶಿ ಮೋನಪ್ಪ ದೇವಸ್ಯ, ರಾಜ್ಯ ಸಾಮಾಜಿಕ ಜಾಲತಾಣದ ಕುಮಾರ್ ರಾಮಚಂದ್ರ, ಮೂಡಬಿದ್ರೆ ಮಂಡಲ ಅಧ್ಯಕ್ಷ ಸುನಿಲ್ ಆಳ್ವ, ಹಾಗೂ ಒಬಿಸಿ ಮೋರ್ಚಾದ ಎಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು. ಓಬಿಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿಯಾದ ಪ್ರಭಾಕರ್ ಕುಲಾಲ್ ಕಾರ್ಯಕ್ರಮ ನಿರೂಪಿಸಿದರು. ಪ್ರಧಾನ ಕಾರ್ಯದರ್ಶಿಯಾದ ರಮೇಶ್ ಬೋರ್ ಗುಡ್ಡೆ ಧನ್ಯವಾದ ಅರ್ಪಿಸಿದರು.

Edited By : PublicNext Desk
Kshetra Samachara

Kshetra Samachara

14/05/2022 09:33 pm

Cinque Terre

2.11 K

Cinque Terre

0

ಸಂಬಂಧಿತ ಸುದ್ದಿ