ಪದವಿನಂಗಡಿ:ಭಾರತೀಯ ಜನತಾ ಪಾರ್ಟಿಯ ಹಿಂದುಳಿದ ವರ್ಗಗಳ ಮೋರ್ಚಾ ಮಂಗಳೂರು ನಗರ ಉತ್ತರ ಮಂಡಲದ ವಿಶೇಷ ಸಭೆಯಲ್ಲಿ ಶಾಸಕ ಡಾ.ಭರತ್ ಶೆಟ್ಟಿಯವರು ಭಾಗವಹಿಸಿ ಮಾತನಾಡಿದರು.
ರಾಜ್ಯ ಪ್ರವಾಸದಲ್ಲಿರುವ ಪಕ್ಷದ ರಾಜ್ಯ ಪದಾಧಿಕಾರಿಗಳು ಈ ಸಭೆಯಲ್ಲಿ ಭಾಗವಹಿಸಿದ್ದು, ಪದವಿನಂಗಡಿಯ ಬೆನಕ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಹಿಂದುಳಿದ ವರ್ಗಗಳ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ವಿವೇಕಾನಂದ ಡಬ್ಬಿ, ರಾಜ್ಯ ಓಬಿಸಿ ಮೋರ್ಚಾ ಕಾರ್ಯದರ್ಶಿ ವಿಠಲ ಪೂಜಾರಿ, ರಾಜ್ಯ ಸಾಮಾಜಿಕ ಜಾಲತಾಣದ ಕುಮಾರ್ ರಾಮಚಂದ್ರ, ಓಬಿಸಿ ಜಿಲ್ಲಾಧ್ಯಕ್ಷ ಆರ್.ಸಿ ನಾರಾಯಣ ರೆಂಜ, ಉಪ ಮಹಾಪೌರರಾದ ಸುಮಂಗಳ ರಾವ್, ಓಬಿಸಿ ಜಿಲ್ಲಾ ಉಪಾಧ್ಯಕ್ಷ ರಾಮ ಮುಗ್ರೋಡಿ, ಮಂಗಳೂರು ನಗರ ಉತ್ತರ ಮಂಡಲ ಉಪಾಧ್ಯಕ್ಷ ಬಬಿತಾ ರವೀಂದ್ರ, ಜಿಲ್ಲಾ ಮೋರ್ಚಾ ಕಾರ್ಯಕಾರಿಣಿ ಸದಸ್ಯರಾದ ಜನಾರ್ಧನ ಅರ್ಕುಳ, ಮೋರ್ಚಾ ಅಧ್ಯಕ್ಷರಾದ ಗಂಗಾಧರ್ ಸನಿಲ್, ಮಂಡಲ ಪದಾಧಿಕಾರಿಗಳು, ಮಂಗಳೂರು ಮಹಾನಗರ ಪಾಲಿಕೆಯ ಕಾರ್ಪೊರೇಟರ್ ಗಳು, ಪಕ್ಷದ ಪ್ರಮುಖರು, ಮೋರ್ಚಾದ ಪದಾಧಿಕಾರಿಗಳು, ಸದಸ್ಯರು, ಮಹಾಶಕ್ತಿ ಕೇಂದ್ರದ ಪ್ರತಿನಿಧಿಗಳು ಉಪಸ್ಥಿತರಿದ್ದರು.
Kshetra Samachara
14/05/2022 10:12 pm