ಮುಲ್ಕಿ: ಭಾರತದ ಪ್ರಧಾನಿ ನರೇಂದ್ರ ಮೋದಿ ಸರ್ಕಾರ 8 ವರ್ಷ ಪೂರ್ಣಗೊಳಿಸಿದ ಸಂಧರ್ಭದಲ್ಲಿ ಹಮ್ಮಿಕೊಳ್ಳಲಾಗಿರುವ "ಸೇವೆ, ಸುಶಾಸನ ಮತ್ತು ಬಡವರ ಕಲ್ಯಾಣ" ಕಾರ್ಯಕ್ರಮದ ಮುಲ್ಕಿ ಮಹಾಶಕ್ತಿ ಕೇಂದ್ರದ ಪೂರ್ವಭಾವಿ ಸಭೆ ಮುಲ್ಕಿ ಸ್ವಾಗತ್ ಹೋಟೆಲ್ ನ ಸಭಾಂಗಣದಲ್ಲಿ ನಡೆಯಿತು.
ಮಂಡಲ ಅಧ್ಯಕ್ಷ ಸುನಿಲ್ ಆಳ್ವ, ಮತ್ತು ಸಂಚಾಲಕರಾದ ವಿನೋದ್ ಸಾಲ್ಯಾನ್ ಬೆಳ್ಳಾಯರು ಕಾರ್ಯಕ್ರಮದ ಮಾಹಿತಿ ನೀಡಿದರು.
ಸಭೆಯಲ್ಲಿ ಶಕ್ತಿಕೇಂದ್ರದ ಅಧ್ಯಕ್ಷ ಜಯಾನಂದ ಮುಲ್ಕಿ, ಕಾರ್ಯದರ್ಶಿ ಹರೀಶ್ ಕೋಟ್ಯಾನ್ , ನಗರ ಪಂಚಾಯತ್ ಅಧ್ಯಕ್ಷ ಸುಭಾಷ್ ಶೆಟ್ಟಿ, ಉಪಾಧ್ಯಕ್ಷರಾದ ಸತೀಶ್ ಅಂಚನ್ ,ಪಕ್ಷದ ಪದಾಧಿಕಾರಿಗಳು,ಪ್ರಮುಖರು, ಮುಲ್ಕಿ ನಗರ ಪಂಚಾಯತ್ ಸದಸ್ಯರು, ಉಪಸ್ಥಿತರಿದ್ದರು.
Kshetra Samachara
08/06/2022 10:11 pm