ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪದವಿನಂಗಡಿ: "ಬಡವರ ಕಲ್ಯಾಣ ದಂತಹ ಕಾರ್ಯಕ್ರಮಗಳು ಕಾರ್ಯಕ್ರಮಗಳು ನಿರಂತರವಾಗಿ ನಡೆಯಲಿ"

ಪದವಿನಂಗಡಿ: ಭಾರತದ ಪ್ರಧಾನಿ ನರೇಂದ್ರ ಮೋದಿ ಆಡಳಿತದ 8 ನೇ ವರ್ಷಾಚರಣೆ ಪ್ರಯುಕ್ತ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ವತಿಯಿಂದ ಸೇವೆ, ಸುಶಾಸನ, ಬಡವರ ಕಲ್ಯಾಣ ಕಾರ್ಯಕ್ರಮದ ಅಡಿಯಲ್ಲಿ ನಗರ ಬಡವರ ಕಲ್ಯಾಣ ವಿಭಾಗದ ವತಿಯಿಂದ ಪದವಿನಂಗಡಿ ಬೆನಕ ಸಭಾಭವನದಲ್ಲಿ ಉಚಿತ ಇ-ಶ್ರಮ ಕಾರ್ಡ್, ಅಯುಷ್ಮಾನ್ ಕಾರ್ಡ್, ಕಾರ್ಮಿಕ ಕಾರ್ಡ್ ಹಾಗೂ ರೇಷನ್ ಕಾರ್ಡ್ ನವೀಕರಣ ಕಾರ್ಯಕ್ರಮ ನಡೆಯಿತು.

ಶಾಸಕ ಡಾ. ಭರತ್ ಶೆಟ್ಟಿಯವರು ಕಾರ್ಯಕ್ರಮ ಉದ್ಘಾಟಿಸಿ ಮೋದಿಜಿ ಯೋಜನೆಗಳು ಅಂತ್ಯೋದಯ ಕಲ್ಪನೆಯಲ್ಲಿ ಸಮಾಜದ ಕಟ್ಟ ಕಡೆ ವ್ಯಕ್ತಿಗಳಿಗೆ ಮುಟ್ಟುವಲ್ಲಿ ಇಂತಹ ಕಾರ್ಯಕ್ರಮಗಳು ನಿರಂತರವಾಗಿ ನಡೆಯಲಿ ಎಂದು ಶುಭ ಹಾರೈಸಿದರು.

ಜಿಲ್ಲಾ ಕಾರ್ಯದರ್ಶಿ ಪೂಜಾ ಪ್ರಶಾಂತ್ ಪೈ, ಮಂಡಲ ಅಧ್ಯಕ್ಷ ತಿಲಕ್ ರಾಜ್ ಕೃಷ್ಣಾಪುರ, ಪ್ರಧಾನ ಕಾರ್ಯದರ್ಶಿ ರಾಜೇಶ್ ಕೊಟ್ಟಾರಿ, ಸಂದೀಪ್ ಬೊಂದೇಲ್, ಉಪ ಮಹಾಪೌರ ಸುಮಂಗಲಾ ರಾವ್, ಮಹಾ ನಗರ ಪಾಲಿಕೆ ಸದಸ್ಯರಾದ ಸಂಗೀತ ನಾಯಕ್, ಪಾಲಿಕೆ ಸದಸ್ಯರು, ಮೋರ್ಚಾಗಳ ಪದಾಧಿಕಾರಿಗಳು, ಪಕ್ಷದ ಪ್ರಮುಖರು, ಶಕ್ತಿಕೇಂದ್ರ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

12/06/2022 05:55 pm

Cinque Terre

1.89 K

Cinque Terre

0

ಸಂಬಂಧಿತ ಸುದ್ದಿ