ಮುಲ್ಕಿ:ಕಾಂಗ್ರೆಸ್ ಕಾರ್ಯಕರ್ತರು ಆಶಾಭಾವನೆಯೊಂದಿಗೆ ಪಕ್ಷ ಸಂಘಟನೆಯಲ್ಲಿ ಶ್ರಮಪಟ್ಟರೆ ಮುಂಬರುವ ಎಲ್ಲಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಜಯಭೇರಿ ಗಳಿಸಲಿದೆ ಎಂದು ವಿಧಾನಪರಿಷತ್ ಶಾಸಕ ಹರೀಶ್ ಕುಮಾರ್ ಹೇಳಿದರು.
ಅವರು ಮುಲ್ಕಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಆಶ್ರಯದಲ್ಲಿ ಎಸ್ ಕೋಡಿಯ ಪದ್ಮಾವತಿ ಹಾಲ್ ನಲ್ಲಿ ಹಳೆಯಂಗಡಿ ಜಿ ಪಂ ಕ್ಷೇತ್ರದ ಕಾಂಗ್ರೆಸ್ ಕಾರ್ಯಕಾರಿಣಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ವಿಧಾನಪರಿಷತ್ ಶಾಸಕಮಂಜುನಾಥ ಭಂಡಾರಿಯವರು ಕಾರ್ಯಕರ್ತರೊಂದಿಗೆ ಸಂವಾದ ಕಾರ್ಯಕ್ರಮ ನಡೆಸಿದರು.
ಮುಖ್ಯ ಅತಿಥಿಗಳಾಗಿ ಮಾಜಿ ಸಚಿವ ಕೆ ಅಭಯಚಂದ್ರ ಜೈನ್, ಮತ್ತು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ ಭಾಗವಹಿಸಿದ್ದರು.
ಮುಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೋಹನ್ ಕೋಟ್ಯಾನ್ ಸ್ವಾಗತಿಸಿ ಕೆಪಿಸಿಸಿ ಕೋಆರ್ಡಿನೇಟರ್ ಹೆಚ್ ವಸಂತ ಬೆರ್ನಾಡ್ ವಂದಿಸಿದರು.
ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಸದಸ್ಯತ್ವ ಅಭಿಯಾನದಲ್ಲಿ ಸಕ್ರಿಯವಾಗಿ ತೊಡಗಿಸಿದ ಕಾರ್ಯಕರ್ತರನ್ನು ಗೌರವಿಸಲಾಯಿತು.
ವೇದಿಕೆಯಲ್ಲಿ ದಕ ಜಿ ಪಂ ರಾಜ್ ಸಂಘಟನೆಯ ಸಂಚಾಲಕ ಸುಭಾಶ್ಚಂದ್ರ ಶೆಟ್ಟಿ, ಮೂಡಬಿದ್ರೆ ವಿಧಾನಸಭಾ ಕ್ಷೇತ್ರದ ಉಸ್ತುವಾರಿ ಮಮತಾ ಗಟ್ಟಿ, ಜಿಲ್ಲಾ ಮಹಿಳಾ ಅಧ್ಯಕ್ಷೆ ಶಾಲೆಟ್ ಪಿಂಟೋ, ಮುಲ್ಕಿ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪದ್ಮಾವತಿ ಶೆಟ್ಟಿ ನಾಯಕರುಗಳಾದ ಬಾಲಾದಿತ್ಯ ಆಳ್ವ,ಅಶೋಕ್ ಪೂಜಾರ, ಸಾಹುಲ್ ಹಮೀದ್ ಕದಿಕೆ, ಗುರುರಾಜ ಪುಜಾರಿ, ಕೆಮ್ರಾಲ್ ಅಧ್ಯಕ್ಷೆ ಲೀಲಾ ಕೃಷ್ಣಪ್ಪ, ಅಶ್ವಿನ್ ಅಲ್ವಾ, ಉಮೇಶ್ ಪೂಜಾರಿ, ಮಯ್ಯದ್ದಿ ಪಕ್ಷಿಕೆರೆ , ಮೊದಲಾದವರಿದ್ದರು.
Kshetra Samachara
12/06/2022 08:05 pm