ಮೂಡಬಿದ್ರೆ: ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ 8 ವರ್ಷಗಳನ್ನು ಪೂರೈಸಿರುವ ಸಂಧರ್ಭದಲ್ಲಿ, ಭಾರತೀಯ ಜನತಾ ಪಾರ್ಟಿ ಮೂಲ್ಕಿ - ಮೂಡುಬಿದಿರೆ ಮಂಡಲದ ವತಿಯಿಂದ ಆಯೋಜಿಸಲಾದ "ಫಲಾನುಭವಿಗಳ ಸಮಾವೇಶ" ವನ್ನು ಶಾಸಕ ಉಮಾನಾಥ್ ಕೋಟ್ಯಾನ್ ಉದ್ಘಾಟಿಸಿದರು.
ಜಿಲ್ಲಾಧ್ಯಕ್ಷ ಸುದರ್ಶನ್ ಮೂಡುಬಿದಿರೆ, ಮಂಡಲಾಧ್ಯಕ್ಷ ಸುನಿಲ್ ಆಳ್ವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ವೇದಿಕೆಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಸ್ತೂರಿ ಪಂಜ, ಜಿಲ್ಲಾ ಉಪಾಧ್ಯಕ್ಷ ಈಶ್ವರ್ ಕಟೀಲ್,ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸುಕೇಶ್ ಶೆಟ್ಟಿ, ಪುರಸಭಾ ಅಧ್ಯಕ್ಷ ಪ್ರಸಾದ್ ಕುಮಾರ್ ,ಮೂಡ ಅಧ್ಯಕ್ಷ ಮೇಘನಾಥ್ ಶೆಟ್ಟಿ,ಕೆ.ಎಂ. ಎಫ್ ಅಧ್ಯಕ್ಷ ಸುಚರಿತ ಶೆಟ್ಟಿ, ಕೃಷ್ಣರಾಜ ಹೆಗ್ಡೆ, ಮಂಡಲ ಫಲಾನುಭವಿಗಳ ಪ್ರಕೋಷ್ಟದ ಸಂಚಾಲಕ ಬೋಳ ವಿಶ್ವನಾಥ್ ಕಾಮತ್ , ಕಿಶೋರ್ ಕುಮಾರ್ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಗೋಪಾಲ್ ಶೆಟ್ಟಿಗಾರ್, ಕೇಶವ ಕರ್ಕೇರಾ ಹಾಗೂ ಪಕ್ಷದ ಪ್ರಮುಖರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.
Kshetra Samachara
19/06/2022 03:31 pm