ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು:"ಪೌರ ಕಾರ್ಮಿಕರ ಬೇಡಿಕೆಗಳನ್ನು ಸರ್ಕಾರ ಕೂಡಲೇ ಈಡೇರಿಸುವತ್ತ ಗಮನ ನೀಡಬೇಕು"

ಮಂಗಳೂರು:ಪೌರ ಕಾರ್ಮಿಕರ ಸೇವಾ ಖಾಯಮಾತಿ, ಸಮಾನ ವೇತನ, ಇತರ ಬೇಡಿಕೆಗಳನ್ನು ಈಡೇರಿಸಲು ಪೌರ ಕಾರ್ಮಿಕರು ನಡೆಸುತ್ತಿರುವ ಪ್ರತಿಭಟನೆಗೆ ಕೂಡಲೇ ಸರಕಾರ ಸ್ಪಂದನೆ ನೀಡಬೇಕು ಎಂದು ದ.ಕ ಜಿಲ್ಲಾ ಅಮ್ ಅದ್ಮಿ ಪಕ್ಷ ಒತ್ತಾಯಿಸಿ ಜಿಲ್ಲಾಧಿಕಾರಿಗಳ ಮುಖಾಂತರ ಸರಕಾರಕ್ಕೆ ಅಗ್ರಹ ಪತ್ರ ನೀಡಲು ಪಕ್ಷದ ಅಧ್ಯಕ್ಷರಾದ ಸಂತೋಷ್ ಕಾಮತ್ ನೇತೃತ್ವದಲ್ಲಿ ನಡೆದ ಪಕ್ಷದ ಕೋರ್ ಕಮಿಟಿ ಸಭೆಯಲ್ಲಿ ಎಲ್ಲಾ ಮುಖಂಡರು ಸರ್ವ ರೀತಿಯ ಬೆಂಬಲ ನೀಡಲು ತೀರ್ಮಾನ ಕೈಗೊಳ್ಳಲಾಯಿತು .

"ಕರ್ನಾಟಕದಲ್ಲಿನ ಆಡಳಿತಾರೂಢ ಬಿಜೆಪಿಗೆ ಪೌರ ಕಾರ್ಮಿಕರ ನೋವು ಕಾಣಿಸುತ್ತಿಲ್ಲ. ಅವರ ಸಮಸ್ಯೆಗಳನ್ನು ಇತ್ಯರ್ಥಪಡಿಸುವುದಿರಲಿ, ಸಮಸ್ಯೆಗೆ ಸ್ಪಂದಿಸುವ ಕನಿಷ್ಠ ಸೌಜನ್ಯವನ್ನು ಪ್ರದರ್ಶಿಸಿಲ್ಲ. ಹೀಗಾಗಿ ಪೌರ ಕಾರ್ಮಿಕರು ಪದೇಪದೇ ಪ್ರತಿಭಟನೆ ನಡೆಸುತ್ತಿದ್ದರೂ ಗಮನಹರಿಸಿದ ಬಿಜೆಪಿ ನೇತೃತ್ವದ ಸರ್ಕಾರವು ಮೊಂಡುತನ ಪ್ರದರ್ಶಿಸುತ್ತಿದೆ"

ಪೌರ ಕಾರ್ಮಿಕರಿಗೆ ಸೂಕ್ತ ಸೌಲಭ್ಯ ಕೊಡಿ, ಪೌರ ಕಾರ್ಮಿಕರ ಬೇಡಿಕೆಗಳನ್ನು ಸರ್ಕಾರ ಕೂಡಲೇ ಈಡೇರಿಸುವತ್ತ ಗಮನ ನೀಡಬೇಕು'

ಪೌರ ಕಾರ್ಮಿಕರ ವಿಶೇಷ ನೇಮಕಾತಿ ನಿಯಮ 2017ರಲ್ಲಿ ರಸ್ತೆ ಸ್ವಚ್ಛಗೊಳಿಸುವವರನ್ನು ಮಾತ್ರ ಪೌರ ಕಾರ್ಮಿಕರೆಂದು ಪರಿಗಣಿಸಲಾಗಿದೆ,ಇತರ ಕಾರ್ಮಿಕರಿಗೂ ಸರ್ಕಾರಿ ಸೌಲಭ್ಯ ಸಿಗಬೇಕು.

ಪೌರ ಕಾರ್ಮಿಕರಂತೆ ನಗರದ ಸೌಂದರ್ಯಕ್ಕಾಗಿ ಸಹಾಯಕ ಗುತ್ತಿಗೆ ಆಧಾರದಲ್ಲೇ ವರ್ಷಗಳಿಂದಲೂ ಬದುಕು ಸಾಗಿಸುತ್ತಿರುವ ಒಳಚರಂಡಿ ಶುಚಿಗೊಳಿಸುವ ಕಾರ್ಮಿಕರು, ಕಸ ತೆಗೆಯುವವರು, ಕಸದ ಲಾರಿ ಚಾಲಕರು, ಕಸ ಲೋಡ್ ಮಾಡುವವರು ಸೇರಿದಂತೆ ಇನ್ನಿತರ ಕಾರ್ಮಿಕರು ನಗರದಲ್ಲಿದ್ದಾರೆ. ಅವರಿಗೂ ಸಹ ಸರ್ಕಾರದ ಎಲ್ಲ ಸೌಲಭ್ಯಗಳು ಸಿಗುವಂತಾಗಬೇಕು. ಈ ನಿಟ್ಟಿನಲ್ಲಿ ಸರ್ಕಾರ ಸೂಕ್ತ ನಿರ್ಧಾರ ಕೈಗೊಳ್ಳಬೇಕು ಎಂದು ದ.ಕ ಜಿಲ್ಲೆಯ ಅಮ್ ಅದ್ಮಿ ಪಕ್ಷ ಸರಕಾರವನ್ನು ಒತ್ತಾಯಿಸಿದೆ.

Edited By : PublicNext Desk
Kshetra Samachara

Kshetra Samachara

04/07/2022 09:48 pm

Cinque Terre

2.12 K

Cinque Terre

0

ಸಂಬಂಧಿತ ಸುದ್ದಿ