ಮುಲ್ಕಿ: ಮುಲ್ಕಿ ಬ್ಲಾಕ್ ಕಾಂಗ್ರೆಸ್ ಹಾಗೂ ಯುವ ಕಾಂಗ್ರೆಸ್ ವತಿಯಿಂದ ಯುವ ಕಾಂಗ್ರೆಸ್ ಪದಾಧಿಕಾರಿಗಳ ಸಮಾವೇಶ ಹಳೆಯಂಗಡಿಯ ಮುಲ್ಕಿ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಭಾರತೀಯ ರಾಷ್ಟ್ರೀಯ ಯುವ ಕಾಂಗ್ರೆಸ್ ಪದಾಧಿಕಾರಿಗಳಾದ ತೇಜಸ್ವಿ ಮಂಜ್ರೇಕರ್ ಮಾತನಾಡಿ ಯುವ ಕಾಂಗ್ರೆಸ್ ಪದಾಧಿಕಾರಿಗಳು ತಳಮಟ್ಟದಲ್ಲಿ ಕಾರ್ಯಕರ್ತರನ್ನು ಸಂಘಟಿಸುವ ಮೂಲಕ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಪ್ರಯತ್ನಿಸಬೇಕು ಎಂದರು.
ರಾಜ್ಯ ಯುವ ಕಾಂಗ್ರೆಸ್ ಉಪಾಧ್ಯಕ್ಷೆ ಭವ್ಯ ಕೆ ಆರ್ ಮಾತನಾಡಿ ಯುವ ಪದಾಧಿಕಾರಿಗಳು ಕಾರ್ಯಕರ್ತರ ಜೊತೆ ಹೊಂದಾಣಿಕೆಯಿಂದ ಕೆಲಸ ಮಾಡಿ ಆಡಳಿತ ಬಿಜೆಪಿ ಪಕ್ಷದ ವೈಫಲ್ಯಗಳನ್ನು ಜನರಿಗೆ ಮನದಟ್ಟು ಮಾಡಿ ಕಾಂಗ್ರೆಸ್ ಪಕ್ಷದ ಇತಿಹಾಸವನ್ನು ತಿಳಿಸುವ ಯತ್ನ ಮಾಡಬೇಕು ಎಂದರು.
ವೇದಿಕೆಯಲ್ಲಿ ರಾಜ್ಯ ಯುವ ಕಾಂಗ್ರೆಸ್ ಕಾರ್ಯದರ್ಶಿ ರಾಜಾ ಹುಲಿ,ದ.ಕ ಯೂತ್ ಕಾಂಗ್ರೆಸ್ ಅಧ್ಯಕ್ಷ ಲುಕ್ಮಾನ್ ಬಂಟ್ವಾಳ, ಉಪಾಧ್ಯಕ್ಷ ಗಿರೀಶ್ ಆಳ್ವ, ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸರ್ಪರಾಜ್,ಮುಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೋಹನ್ ಕೋಟ್ಯಾನ್, ಯುವ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಪೂಜಾರ್,ಮೂಡಬಿದ್ರೆ ಯುವ ಕಾಂಗ್ರೆಸ್ ಅಧ್ಯಕ್ಷ ಜಯ ಕುಮಾರ್ ಶೆಟ್ಟಿ, ರೂಪೇಶ್ ರೈ ಮತ್ತಿತರರು ಉಪಸ್ಥಿತರಿದ್ದರು.
Kshetra Samachara
20/07/2022 06:10 pm