ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಾವೂರು: ಪ್ರಧಾನಿ ಮೋದಿ, ಮಂಗಳೂರು ಭೇಟಿ; ಕಾರ್ಯಕರ್ತರು ಸಮಾವೇಶ ಯಶಸ್ವಿಗೊಳಿಸಿ: ಡಾ. ಭರತ್ ಶೆಟ್ಟಿ

ಮಂಗಳೂರು: ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಸೆ. 2 ರಂದು ಮಂಗಳೂರಿಗೆ ಆಗಮಿಸಿ ಮಂಗಳೂರು ನಗರ ಉತ್ತರ ಕ್ಷೇತ್ರದ ಗೋಲ್ಡ್ ಫಿಂಚ್ ಸಿಟಿ ಮೈದಾನದಲ್ಲಿ ನಡೆಯಲಿರುವ ಸಮಾವೇಶದಲ್ಲಿ ಭಾಗವಹಿಸುವ ಕಾರ್ಯಕ್ರಮದ ಪೂರ್ವಭಾವಿಯಾಗಿ ಶಾಸಕರಾದ ಡಾ.ಭರತ್ ಶೆಟ್ಟಿಯವರ ನೇತೃತ್ವದಲ್ಲಿ ಕಾವೂರಿನ ಸೊಸೈಟಿ ಹಾಲ್ ನಲ್ಲಿ ಸಭೆ ನಡೆಯಿತು.

ಈ ಸಂದರ್ಭ ಶಾಸಕರು ಮಾತನಾಡಿ ಸಮಾವೇಶದಲ್ಲಿ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ್ ಮೂಡುಬಿದಿರೆ, ಜಿಲ್ಲಾ ಉಪಾಧ್ಯಕ್ಷ ಪ್ರಭಾ ಮಾಲಿನಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಸ್ತೂರಿ ಪಂಜ, ವಿಭಾಗ ಸಂಘಟನಾ ಕಾರ್ಯದರ್ಶಿ ಪ್ರಸಾದ ಕುಮಾರ್, ಮಂಡಲ ಉಪಾಧ್ಯಕ್ಷ ಬಬಿತಾ, ಮಂಡಲ ಪ್ರಧಾನ ಕಾರ್ಯದರ್ಶಿ ರಾಜೇಶ್ ಕೊಟ್ಟಾರಿ, ಸಂದೀಪ್ ಪಚ್ಚನಾಡಿ ಮತ್ತು ಪಕ್ಷದ ಜಿಲ್ಲಾ ಮತ್ತು ಮಂಡಲದ ವಿವಿಧ ಮೋರ್ಚಾಗಳ ಪದಾಧಿಕಾರಿಗಳು, ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

26/08/2022 07:51 am

Cinque Terre

958

Cinque Terre

1

ಸಂಬಂಧಿತ ಸುದ್ದಿ