ಪುತ್ತೂರು : ಸೆಪ್ಟೆಂಬರ್ 2 ರಂದು ಮಂಗಳೂರಿನಲ್ಲಿ ನಡೆಯುವ ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮಕ್ಕೆ ಪುತ್ತೂರು ವಿಧಾನಸಭಾ ಕ್ಷೇತ್ರದಿಂದ ಸುಮಾರು 25 ಸಾವಿರ ಮಂದಿ ಭಾಗವಹಿಸಲಿದ್ದಾರೆ ಎಂದು ಪುತ್ತೂರು ಶಾಸಕ ಸಂಜೀವ ಮಠಂದೂರು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಕೇಂದ್ರ ಸರಕಾರದ ವಿವಿಧ ಯೋಜನೆಗಳ ಫಲಾನುಭವಿಗಳ ಸಮಾವೇಶ ಮಂಗಳೂರಿನ ಕೂಳೂರಿನಲ್ಲಿರುವ ಗೋಲ್ಡ್ ಪಿಂಚ್ ಮೈದಾನದಲ್ಲಿ ನಡೆಯಲಿದ್ದು, ಕೇಂದ್ರ ಸರಕಾರದ ಹಲವು ಯೋಜನೆಗಳ ಸುಮಾರು 10 ಸಾವಿರ ಮಂದಿ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿದ್ದಾರೆ. ಅಲ್ಲದೆ ಸುಮಾರು 15 ಸಾವಿರ ಬಿಜೆಪಿ ಕಾರ್ಯಕರ್ತರು ಮತ್ತು ಸಾರ್ವಜನಿಕರೂ ಸಭೆಯಲ್ಲಿ ಪಾಲ್ಗೊಳ್ಳಲಿದ್ದು, ಕಾರ್ಯಕರ್ತರು ಮತ್ತು ಸಾರ್ವಜನಿಕರಿಗಾಗಿ ಬಿಜೆಪಿ ಪಕ್ಷ 175 ಕ್ಕೂ ಮಿಕ್ಕಿದ ಬಸ್ ಸೇರಿದಂತೆ ಇತರ ಖಾಸಗಿ ವಾಹನಗಳನ್ನೂ ಜೋಡಿಸಲಾಗಿದೆ ಎಂದರು. ಸರಕಾರದ ಯೋಜನೆಗಳ ಫಲಾನುಭವಿಗಳಿಗಾಗಿ ಜಿಲ್ಲಾಡಳಿತವೇ ವಾಹನ ವ್ಯವಸ್ಥೆ ಸೇರಿದಂತೆ ಊಟೋಪಚಾರದ ವ್ಯವಸ್ಥೆಯನ್ನೂ ಕಲ್ಪಿಸಿದ್ದು, ಸೆಪ್ಟೆಂಬರ್ 2 ರಂದು ಮಧ್ಯಾಹ್ನ 1 ಗಂಟೆ ಒಳಗೆ ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಸೇರಬೇಕೆಂದು ಅವರು ಇದೇ ಸಂದರ್ಭದಲ್ಲಿ ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.
Kshetra Samachara
26/08/2022 12:34 pm