ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮುಲ್ಕಿ: ಯೂತ್ ಕಾಂಗ್ರೆಸ್ ವತಿಯಿಂದ "ಯೂತ್ ಜೋಡೋ ಬೂತ್ ಜೋಡೋ"ಕಾರ್ಯಕ್ರಮಕ್ಕೆ ಚಾಲನೆ

ಮುಲ್ಕಿ: ಮುಲ್ಕಿ ಯುವ ಕಾಂಗ್ರೆಸ್ ವತಿಯಿಂದ ಅಧ್ಯಕ್ಷ ಅಶೋಕ್ ಪೂಜಾರ ನೇತೃತ್ವದಲ್ಲಿ ನಗರ ವ್ಯಾಪ್ತಿಯಲ್ಲಿ "ಯೂತ್ ಜೋಡೋ ಬೂತ್ ಜೋಡೋ"ಕಾರ್ಯಕ್ರಮಕ್ಕೆ ಮುಲ್ಕಿಕಾಂಗ್ರೆಸ್ ಪ್ರಜಾಪ್ರತಿನಿಧಿ ಕಚೇರಿಯಲ್ಲಿ ಚಾಲನೆ ನೀಡಲಾಯಿತು.

ಕಾರ್ಯಕ್ರಮವನ್ನು ಉದ್ದೇಶಿಸಿ ದಕ್ಷಿಣ ಕನ್ನಡ ಜಿಲ್ಲಾ ಯೂತ್ ಕಾಂಗ್ರೆಸ್ ಅಧ್ಯಕ್ಷ ಲುಕ್ಮಾನ್ ಬಂಟ್ವಾಳ ಮಾತನಾಡಿ ಕಾರ್ಯಕರ್ತರು ನಗರ ವ್ಯಾಪ್ತಿಯಲ್ಲಿ ಯೂತ್ ಜೋಡೋ ಭಾರತ್ ಜೋಡೋ ಪಕ್ಷ ಸಂಘಟನೆ ಮೂಲಕ ಕೇಂದ್ರ ಹಾಗೂ ರಾಜ್ಯ ಸರಕಾರದ ಬಿಜೆಪಿ ಆಡಳಿತ ವೈಫಲ್ಯವನ್ನು ಜನರಿಗೆ ಮನಗಾಣಿಸಬೇಕು ಎಂದರು.

ಈ ಸಂದರ್ಭ ದಕ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಗಿರೀಶ್ ಆಳ್ವ, ರಾಜ್ಯ ಯೂತ್ ಕಾಂಗ್ರೆಸ್ ಕಾರ್ಯದರ್ಶಿ ಮೇರಿಲ್ ರೋಗೋ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರಸಾದ್ ಮಲ್ಲಿ, ಮುಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೋಹನ್ ಕೋಟ್ಯಾನ್, ರಾಜ್ಯ ಕಾರ್ಯದರ್ಶಿ ಸರ್ಫರಾಜ್, ಮುಲ್ಕಿ ನಪಂ ಸದಸ್ಯರಾದ ಪುತ್ತು ಬಾವ ಯೋಗೀಶ್ ಕೋಟ್ಯಾನ್, ಮಂಜುನಾಥ ಕಂಬಾರ, ಬಾಲಚಂದ್ರ ಕಾಮತ್, ಮುನ್ನ ಯಾನೆ ಮಹೇಶ್ ಪ್ರಜಾಪ್ರತಿನಿಧಿ ಸಮಿತಿ ಅಧ್ಯಕ್ಷ ಜನಾರ್ಧನ ಬಂಗೇರ ಮತ್ತಿತರರು ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಮುಲ್ಕಿ ನಗರ ಸಮಿತಿಯ ನೂತನ ಅಧ್ಯಕ್ಷರಾಗಿ ದೀಕ್ಷಿತ್ ಸುವರ್ಣ ರವರನ್ನು ನೇಮಕ ಮಾಡಲಾಯಿತು.

Edited By : PublicNext Desk
Kshetra Samachara

Kshetra Samachara

24/09/2022 07:25 pm

Cinque Terre

1.44 K

Cinque Terre

0

ಸಂಬಂಧಿತ ಸುದ್ದಿ