ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಿಂದೂ ದೇವರ ಅವಹೇಳನಕಾರಿ ಹೇಳಿಕೆ: ಸನಾತನ ಸಂಸ್ಥೆಯಿಂದ ಸರಕಾರಕ್ಕೆ ಮನವಿ

ಶ್ರೀರಾಮ, ಸೀತಾಮಾತೆ ಮತ್ತು ಆಂಜನೇಯ ಸ್ವಾಮಿಯ ವಿರುದ್ಧ ಅಸಹ್ಯಕರ ಹೇಳಿಕೆ ನೀಡಿದ ಕಾಂಗ್ರೆಸ್ ಮುಖಂಡ ಶೈಲಜಾ ಅಮರನಾಥ್ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯಿಸಿ ಸನಾತನ ಸಂಸ್ಥೆ ವತಿಯಿಂದ ಪುತ್ತೂರು ಸಹಾಯಕ ಆಯುಕ್ತರ ಮುಖಾಂತರ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು.

ಮನವಿಯ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಹಿಂದೂ ಮುಖಂಡ ದಿನೇಶ್ ಜೈನ್, ಹಿಂದೂ ದೇವರುಗಳ ಬಗ್ಗೆ ಅಸಹ್ಯವಾಗಿ ಮಾತನಾಡಿದ ಶೈಲಜಾ ವಿರುದ್ಧ ಕೂಡಲೇ ಕಾನೂನು ಕ್ರಮ ಕೈಗೊಳ್ಳದೇ ಹೋದಲ್ಲಿ ಇಡೀ ಹಿಂದೂ ಸಮಾಜ ಬೀದಿಗೆ ಬಂದು ಹೋರಾಟ ನಡೆಸಬೇಕಾಗುತ್ತದೆ ಎಚ್ಚರಿಸಿದರು.

ಆಧಾರ ಸಹಿತ ಪ್ರವಾದಿ ಮಹಮ್ಮದ್ ಬಗ್ಗೆ ಹೇಳಿಕೆ ನೀಡಿದ ನೂಪುರ್ ಶರ್ಮಾ ವಿರುದ್ಧ ಉತ್ತರಪ್ರದೇಶದಲ್ಲಿ ಯಾವ ರೀತಿ ಪ್ರತಿಭಟನೆ ನಡೆಯಿತೋ, ಅದೇ ರೀತಿಯಲ್ಲಿ ಮುಂದಿನ ದಿನಗಳಲ್ಲಿ ಹಿಂದೂ ಸಮಾಜ ಪ್ರತಿಕ್ರಿಯೆ ನೀಡಲಿದೆ ಎಂದ ಅವರು ಹಿಂದೂ ಸಮಾಜ ಎಚ್ಚೆತ್ತುಕೊಂಡಲ್ಲಿ ಏನಾಗುತ್ತದೆ ಅನ್ನೋದು ಈ ಹಿಂದೆ ದಕ್ಷಿಣಕನ್ನಡ ಜಿಲ್ಲೆಯಲ್ಲಿ ನಡೆದ ಘಟನೆಗಳನ್ನು ನೆನಪಿಸಿಕೊಳ್ಳೋದು ಒಳಿತು ಎಂದು ಅವರು ಇದೇ ಸಂದರ್ಭದಲ್ಲಿ ಎಚ್ಚರಿಸಿದರು.

Edited By :
PublicNext

PublicNext

21/06/2022 01:11 pm

Cinque Terre

33.86 K

Cinque Terre

1

ಸಂಬಂಧಿತ ಸುದ್ದಿ