ಮುಲ್ಕಿ: ಕಿನ್ನಿಗೋಳಿ ಪಟ್ಟಣ ಪಂಚಾಯತ್ ವತಿಯಿಂದ ಪೌರಕಾರ್ಮಿಕರ ದಿನಾಚರಣೆಯನ್ನು ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ಕಟೀಲು ದೇವಸ್ಥಾನದ ಅನುವಂಶಿಕ ಅರ್ಚಕರಾದ ಹರಿನಾರಾಯಣ ದಾಸ ಆಸ್ರಣ್ಣ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಿನ್ನಿಗೋಳಿ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಶ್ರೀ ಸಾಯೀಶ್ ಚೌಟ ವಹಿಸಿ ಮಾತನಾಡಿ ಪೌರಕಾರ್ಮಿಕರು ಪಟ್ಟಣ ಪಂಚಾಯಿತಿಯ ಆಸ್ತಿಯಾಗಿದ್ದು ಹಗಲಿರುಳೆನ್ನದೆ ಸ್ವಚ್ಛತೆಗಾಗಿ ಶ್ರಮಿಸುತ್ತಿರುವ ಶ್ರಮಜೀವಿಗಳು ಎಂದರು.
ಈ ಸಂದರ್ಭ ಕಟೀಲು ದೇವಸ್ಥಾನದಲ್ಲಿ ದೀರ್ಘಕಾಲದಿಂದ ಸೇವೆ ಸಲ್ಲಿಸುತ್ತಿರುವ ಪೌರ ಕಾರ್ಮಿಕರಾದ ಕಂಬೋಳಿ ಕೊರಗ ಹಾಗೂ ಮೆನ್ನಬೆಟ್ಟು ಗ್ರಾಮ ಪಂಚಾಯತ್ ನಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ತನಿಯ ರವರನ್ನು ಗೌರವಿಸಲಾಯಿತು.
ಮುಖ್ಯ ಅತಿಥಿಗಳಾಗಿ ಯುಗಪುರುಷ ಸಂಸ್ಥೆಯ ಭುವನಾಭಿರಾಮ ಉಡುಪ, ಕಿನ್ನಿಗೋಳಿ ರೋಟರಿ ಕ್ಲಬ್ ಅಧ್ಯಕ್ಷ ಸ್ವರಾಜ್ ಶೆಟ್ಟಿ ಉಪಸ್ಥಿತರಿದ್ದರು.ಪೌರ ಕಾರ್ಮಿಕರ ದಿನಾಚರಣೆ ಪ್ರಯುಕ್ತ ಕಾರ್ಮಿಕರಿಗೆ ನಡೆದ ಆಟೋಟ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.
ರೇವತಿ ಪುರುಷೋತ್ತಮ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.
Kshetra Samachara
23/09/2021 05:16 pm