ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು:ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯ ಮತ್ತು ನೈತಿಕ ಪೋಲಿಸ್ ಗಿರಿ; ರಕ್ಷಣೆಗೆ ಮನವಿ

ಮಂಗಳೂರು:ಕಾಲೇಜು ವಿದ್ಯಾರ್ಥಿನಿಯರ ಮತ್ತು ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯ ಮತ್ತು ನೈತಿಕ ಪೋಲಿಸ್ ಗಿರಿ ಹಾಗೂ ಹೆಚ್ಚುತ್ತಿರುವ ಅತ್ಯಾಚಾರ ಘಟನೆಗಳ ಬಗ್ಗೆ ಚರ್ಚಿಸಿ ಮಹಿಳೆಯರಿಗೆ ಮತ್ತು ವಿದ್ಯಾರ್ಥಿನಿಯರಿಗೆ ಸೂಕ್ತ ರಕ್ಷಣೆ ನೀಡುವಂತೆ ಮಾಜಿ ಶಾಸಕಿ ಶಕುಂತಳಾ ಶೆಟ್ಟಿಯವರ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ ನ ಅಧ್ಯಕ್ಷೆ ಶಾಲೆಟ್ ಪಿಂಟೋರವರ ನೇತೃತ್ವದಲ್ಲಿ ಮಂಗಳೂರು ಪೋಲೀಸ್ ಕಮೀಷನರ್ ರವರಿಗೆ ಮನವಿ ಸಲ್ಲಿಸಲಾಯಿತು.

ಈ ಸಂಧರ್ಭ ದ.ಕ.ಜಿಲ್ಲಾ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶೋಭಾ ಕೇಶವ್ , ಸುರತ್ಕಲ್ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಶಿಕಲಾ ಪದ್ಮನಾಭ್, ಮಂಗಳೂರು ನಗರ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾಂತಲಾ ಗಟ್ಟಿ ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

01/10/2021 03:10 pm

Cinque Terre

13.35 K

Cinque Terre

1

ಸಂಬಂಧಿತ ಸುದ್ದಿ