ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಕೋಡಿಕಲ್ ನಾಗನ ವಿಗ್ರಹ ಎಸೆದು ದುಷ್ಕೃತ್ಯ; ಸ್ಥಳಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಭೇಟಿ

ಮಂಗಳೂರು: ನಗರ ಹೊರವಲಯದ ಬಂಗ್ರಕೂಳೂರು ವಾರ್ಡಿನ ಕೋಡಿಕಲ್ ನಾಗಬನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಗೂ ಮಂಗಳೂರು ಉತ್ತರ ಶಾಸಕ ಡಾ.ವೈ.ಭರತ್ ಶೆಟ್ಟಿ ಭೇಟಿ ನೀಡಿದರು.

ನಾಗನ ವಿಗ್ರಹವನ್ನು ಯಾರೋ ದುಷ್ಕರ್ಮಿಗಳು ಎಸೆದು ದುಷ್ಕೃತ್ಯ ಮೆರೆದಿದ್ದು, ಕೂಡಲೇ ಆರೋಪಿಗಳನ್ನು ಬಂಧಿಸಿ ಇಂತಹ ಕೃತ್ಯಗಳನ್ನು ಇನ್ನು ಜಿಲ್ಲೆಯಲ್ಲಿ ನಡೆಯದಂತೆ ಸೂಕ್ತ ಕ್ರಮಕೈಗೊಳ್ಳಲು ಗ್ರಾಮಸ್ಥರು ಮನವಿ ಮಾಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ್ ಮೂಡಬಿದ್ರಿ, ಮನಪಾ ಸದಸ್ಯರಾದ ಕಿರಣ್ ಕುಮಾರ್ ಕೋಡಿಕಲ್, ಮನೋಜ್ ಕುಮಾರ್, ಲೋಹಿತ್ ಅಮೀನ್ ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

14/11/2021 04:15 pm

Cinque Terre

1.48 K

Cinque Terre

0

ಸಂಬಂಧಿತ ಸುದ್ದಿ