ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಳಾಯಿಬೆಟ್ಟು: ಅತ್ಯಾಚಾರಕ್ಕೀಡಾಗಿ ಕೊಲೆಯಾದ ಬಾಲಕಿ ಮನೆಗೆ ಶಾಸಕ ಡಾ. ಭರತ್ ಶೆಟ್ಟಿ ಭೇಟಿ ಸಾಂತ್ವನ

ಮಂಗಳೂರು: ನಗರದ ಹೊರವಲಯದ ಉಳಾಯಿಬೆಟ್ಟುವಿನಲ್ಲಿ ಕಳೆದ ದಿನಗಳ ಹಿಂದೆ ನಡೆದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಮಾಡಿ ಬರ್ಬರವಾಗಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಗಳಿಗೆ ಮರಣದಂಡನೆ ಶಿಕ್ಷೆಯೂ ಕಡಿಮೆ. ಪೊಲೀಸರು ಆರೋಪಿಗಳು ನೇಣಿನಿಂದ ತಪ್ಪಿಸಿಕೊಳ್ಳದಂತೆ ಪ್ರಬಲ ಪುರಾವೆ ಸಂಗ್ರಹಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಬೇಕು ಎಂದು ಶಾಸಕರಾದ ಡಾ.ಭರತ್ ಶೆಟ್ಟಿ ಹೇಳಿದರು.

ಬಳಿಕ ಮಾಧ್ಯಮದೊಂದಿಗೆ ಮಾತನಾಡಿ ಬಾಲಕಿ ಕುಟುಂಬದವರು ಅನ್ಯ ರಾಜ್ಯದವರಾಗಿದ್ದರೂ ಕಡೆಗಣನೆ ಮಾಡಲಾಗದು. ಸರಕಾರದಿಂದ ಸಿಗಬೇಕಾದ ಪರಿಹಾರ ಸಿಗಲಿದೆ. ಕರೆದುಕೊಂಡು ಬಂದ ಗುತ್ತಿಗೆದಾರರು ಕೂಡ ಈ ಬಗ್ಗೆ ಮಾನವೀಯ ನೆಲೆಯಲ್ಲಿ ಪರಿಹಾರ ಕೊಡಬೇಕು ಎಂದು ಹೇಳಿದರು.

ಪೊಲೀಸರು ತನಿಖೆ ಮಾಡಿ ಆರೋಪಿಗಳನ್ನು ಶೀಘ್ರ ಬಂಧಿಸುವ ಮೂಲಕ ಉತ್ತಮ ಕೆಲಸ ಮಾಡಿದ್ದಾರೆ ಎಂದು ಶ್ಲಾಘಿಸಿದರು. ಉತ್ತರ ಮಂಡಲ ಭಾಜಪಾ ಅಧ್ಯಕ್ಷ ತಿಲಕ್ ರಾಜ್ ಕೃಷ್ಣಾಪುರ, ಪ್ರಧಾನ ಕಾರ್ಯದರ್ಶಿ ರಾಜೇಶ್ ಕೊಟ್ಟಾರಿ, ಸಂದೀಪ್ ಪಚ್ಚನಾಡಿ, ಸ್ಥಳೀಯ ಕಾರ್ಪೊರೇಟರ್ ಹೇಮಲತಾ ರಘು ಸಾಲ್ಯಾನ್, ಜತೆಗಿದ್ದರು.

Edited By : PublicNext Desk
Kshetra Samachara

Kshetra Samachara

25/11/2021 10:40 pm

Cinque Terre

2.05 K

Cinque Terre

0

ಸಂಬಂಧಿತ ಸುದ್ದಿ