ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪಡುಪಣಂಬೂರು: ಉದ್ಯೋಗ ಖಾತರಿ ಯೋಜನೆಗೆ ಗ್ರಾಮಸ್ಥರು ಪ್ರೋತ್ಸಾಹ ನೀಡಬೇಕು

ಮುಲ್ಕಿ: ಪಡುಪಣಂಬೂರು ಗ್ರಾಮ ಪಂಚಾಯತ್ ನ 20021 22 ನೇ ಸಾಲಿನ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಹಾಗೂ 14 ಮತ್ತು 15ನೇ ಹಣಕಾಸು ಯೋಜನೆಯ 2020 21 ನೇ ಸಾಲಿನ ಸಾಮಾಜಿಕ ಪರಿಶೋಧನೆ ಗ್ರಾಮ ಸಭೆ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಂಚಾಯತ್ ಅಧ್ಯಕ್ಷರು ವಹಿಸಿದ್ದರು.

ಗ್ರಾಮಸಭೆಯ ನೋಡಲ್ ಅಧಿಕಾರಿಯಾಗಿ ಬೆಂಗಳೂರು ಕೃಷಿ ಇಲಾಖೆಯ ಸಹಾಯಕ ನಿರ್ದೇಶಕರಾದ ವೀಣಾ ಭಟ್ ವಹಿಸಿ ಮಾತನಾಡಿ ಗ್ರಾಮಸ್ಥರು ಉದ್ಯೋಗ ಖಾತರಿ ಯೋಜನೆಗೆ ಹೆಚ್ಚು ಪ್ರೋತ್ಸಾಹ ನೀಡಲು ವಿನಂತಿಸಿದರು.

ಪಂಚಾಯತ್ ಸದಸ್ಯ ಉಮೇಶ್ ಪೂಜಾರಿ ಮಾತನಾಡಿ ಸರಕಾರದಿಂದ ಅನುದಾನ ಬಿಡುಗಡೆಯಾದ ಮೇಲೆ ಕೆಲಸ ಶುರುಮಾಡಬೇಕು ಮೊದಲೇ ಕೆಲಸ ಮಾಡುವುದು ಸರಿಯಲ್ಲ ಎಂದರು. ಅವರು ಮಾತನಾಡಿ ಕಿಂಡಿ ಆಣೆಕಟ್ಟು ಕಾಮಗಾರಿಗೆ ಹೆಚ್ಚಿನ ಅನುದಾನ ನೀಡುವಂತೆ ಸಭೆಯಲ್ಲಿ ನಿರ್ಣಯ ಮಾಡಬೇಕು ಹಾಗೂ ಪಂಚಾಯತಿ ವ್ಯಾಪ್ತಿಯಲ್ಲಿ ಕಾಮಗಾರಿ ನಡೆಸುವಾಗ ಆಯಾ ವಾರ್ಡಿನ ಸದಸ್ಯರಿಗೆ ಮಾಹಿತಿ ನೀಡಬೇಕು, ಕಾಮಗಾರಿ ನಡೆದ ಸ್ಥಳದಲ್ಲಿ ನಾಮಫಲಕ ಹಾಕಬೇಕು ಎಂದರು.

ಪಂಚಾಯತ್ ವ್ಯಾಪ್ತಿಯ ಬೆಳ್ಳಾಯರು ದೇವಸ್ಯಕಟ್ಟ ಎಂಬಲ್ಲಿ ಕಿಂಡಿ ಆಣೆಕಟ್ಟಿನ ಅಗತ್ಯವಿದೆ ಎಂದು ಗ್ರಾಮಸ್ಥ ಗಿರಿದರ ಹೇಳಿದರು.

ವೇಧಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಪಂಚಾಯತಿ ಅಧ್ಯಕ್ಷೆ ಕುಸುಮಾ ಚಂದ್ರಶೇಖರ್, ತಾಲೂಕು ಸಂಯೋಜಕಿ ಧನಲಕ್ಷ್ಮಿ, ತಾಂತ್ರಿಕ ಸಂಯೋಜಕ ಅಜಿತ್, ಪಂಚಾಯತ್ ಪಿಡಿಒ ರಮೇಶ್ ನಾಯ್ಕ ಕಾರ್ಯದರ್ಶಿ ಲೋಕನಾಥ ಭಂಡಾರಿ ಮತ್ತಿತರರು ಉಪಸ್ಥಿತರಿದ್ದರು.ಸ್ವಾತಿ ನಿರೂಪಿಸಿದರು.

Edited By : PublicNext Desk
Kshetra Samachara

Kshetra Samachara

19/01/2022 01:36 pm

Cinque Terre

1.56 K

Cinque Terre

0

ಸಂಬಂಧಿತ ಸುದ್ದಿ