ಮಂಗಳೂರು:ಸರಕಾರದ ಸೌಲಭ್ಯಗಳನ್ನು ಜನ ಸಾಮಾನ್ಯರಿಗೆ ತಲುಪಿಸುವ ನಿಟ್ಟಿನಲ್ಲಿ ತಳಮಟ್ಟದ ಜನಪ್ರತಿನಿಧಿಗಳು, ಅಧಿಕಾರಿಗಳು ಕೆಲಸ ಮಾಡಿದಾಗ ಮಾತ್ರ ಯಶಸ್ವಿಯಾಗಲು ಸಾಧ್ಯ ಎಂದು ಶಾಸಕರಾದ ಡಾ. ಭರತ್ ಶೆಟ್ಟಿ ವೈ ಹೇಳಿದರು.
ಅವರು ನಗರದ ಹೊರವಲಯದ ಕಾವೂರು ಗ್ರಾಮ ಕರಣಿಕ ಕಚೇರಿಯಲ್ಲಿ ಫಲಾನುಭವಿಗಳಿಗೆ ವಿವಿಧ ಸವಲತ್ತು ವಿತರಿಸಿ ಮಾತನಾಡಿದರು.
ಹಲವಾರು ವರ್ಷಗಳಿಂದ ಮನೆ ಕಟ್ಟಿ ವಾಸಿಸುವ ಕುಟುಂಬಗಳಿಗೆ ಹಕ್ಕು ಪತ್ರ ದೊರಕಿದಾಗ ಸರಕಾರದ ಎಲ್ಲಾ ಯೋಜನೆಗಳ ಲಾಭ ಪಡೆಯಲು ಸಾಧ್ಯ ಎಂದರು.
ಬಿಪಿಎಲ್ ಪಡಿತರ ಚೀಟಿ ಹೊಂದಿರುವ ಬಡ ಕುಟುಂಬಗಳಿಗೆ ನೂರಾರು ಯೋಜನೆಗಳಿದ್ದು ಪಾಲಿಕೆ ವ್ಯಾಪ್ತಿಯಲ್ಲಿ ಬಿಜೆಪಿ ಪಾಲಿಕೆಯ ಸದಸ್ಯರು ಫಲಾನುಭವಿಗಳನ್ನು ಗುರುತಿಸುವಲ್ಲಿ ಉತ್ತಮ ಕಾರ್ಯ ಮಾಡುತ್ತಿದ್ದಾರೆ ಎಂದು ಶ್ಲಾಘಿಸಿದರು.
44 ಹಕ್ಕುಪತ್ರ, 32 ಸಂಧ್ಯಾ ಸುರಕ್ಷೆ,29 ವಿಧವಾ ವೇತನ ಪ್ರಮಾಣ ಪತ್ರ ವಿತರಣೆ ಹಾಗೂ 6 ಮಂದಿಗೆ ಅಂಗವಿಕಲ ಸೌಲಭ್ಯ ಪ್ರಮಾಣ ಪತ್ರ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಉಪಮೇಯರ್ ಸುಮಂಗಳ ರಾವ್, ಮನಪಾ ಸದಸ್ಯರಾದ ಶರತ್ ಕುಮಾರ್, ಲೋಹಿತ್ ಅಮೀನ್, ಗಾಯತ್ರಿ ರಾವ್, ಕಿರಣ್ ಕುಮಾರ್, ಶ್ವೇತ ಪೂಜಾರಿ, ಬಿಜೆಪಿ ಮುಖಂಡರಾದ ಶಿತಿಶ್ ಕೊಂಡೆ, ಉಪತಹಶೀಲ್ದಾರ್ ನವೀನ್, ಕಂದಾಯ ಅಧಿಕಾರಿ ದೇವಿಪ್ರಸಾದ್ ಮಲ್ಯ ಮತ್ತಿತರರು ಉಪಸ್ಥಿತರಿದ್ದರು.
Kshetra Samachara
21/01/2022 06:46 pm