ಮುಲ್ಕಿ : ಮುಲ್ಕಿ ಸಮೀಪದ ಅತಿಕಾರಿಬೆಟ್ಟು ಮೈಲೊಟ್ಟು ಶ್ರೀ ದುರ್ಗಾಪರಮೇಶ್ವರಿ ನಾಗದೇವರ ಹಾಗೂ ಪರಿವಾರ ದೈವಗಳ ಪುನರ್ ಬಿಂಬ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ ವೇದಮೂರ್ತಿ ಸುಬ್ರಮಣ್ಯ ಭಟ್ ನೇತೃತ್ವದಲ್ಲಿ ಹಾಗೂ ಚಂದ್ರಹಾಸ ಬಂಗೇರ ರವರ ಉಪಸ್ಥಿತಿಯಲ್ಲಿ ಭಾನುವಾರ ನಡೆಯಿತು.
ನೂತನವಾಗಿ ನಿರ್ಮಾಣಗೊಂಡ ಶ್ರೀ ದುರ್ಗಾ ಪರಮೇಶ್ವರಿ ಮಂದಿರಕ್ಕೆ ದಕ್ಷಿಣ ಕನ್ನಡ ಬಿಜೆಪಿ ಅಧ್ಯಕ್ಷ ಸುದರ್ಶನ್, ಧಾರ್ಮಿಕ ಪರಿಷತ್ ಸದಸ್ಯ ಭುವನಾಭಿರಾಮ ಉಡುಪ, ಬಿಜೆಪಿ ನಾಯಕರಾದ ಸುನಿಲ್ ಆಳ್ವ, ಈಶ್ವರ್ ಕಟೀಲ್, ಕಸ್ತೂರಿ ಪಂಜ ಮತ್ತಿತರರು ಬೇಟಿ ನೀಡಿ ಪ್ರಸಾದ ಸ್ವೀಕರಿಸಿದರು.
ಮಂದಿರದ ಆಡಳಿತ ಮಂಡಳಿ ಅಧ್ಯಕ್ಷ ಚಂದ್ರಹಾಸ ಬಂಗೇರ, ಅಶೋಕ್ , ಅಣ್ಣು ಕೊಟ್ಯಾನ್ ಮೈಲೊಟ್ಟು ರಮೇಶ್ ಜನನಿ ಮತ್ತಿತರರು ಉಪಸ್ಥಿತರಿದ್ದರು.
Kshetra Samachara
24/01/2022 11:22 am