ಮೂಡಬಿದ್ರೆ: ನಗರದ ಹೊರವಲಯದ ತೆಂಕಮಿಜಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಮಿಜಾರು ಉಳೆಯಂಗಡಿ ಗರಡಿಯಿಂದ ಪಡೀಲ್ ವರೆಗೆ 4.81 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಸಂಪರ್ಕ ರಸ್ತೆ ಮತ್ತು ಸೇತುವೆ ಕಾಮಗಾರಿಗೆ ಮುಲ್ಕಿ ಮೂಡುಬಿದಿರೆ ಶಾಸಕ ಉಮಾನಾಥ್ ಕೋಟ್ಯಾನ್ ಶಿಲಾನ್ಯಾಸ ನೆರವೇರಿಸಿದರು.
ಈ ಸಂದರ್ಭ ಅವರು ಮಾತನಾಡಿ ಗ್ರಾಮೀಣ ಭಾಗದ ಅಭಿವೃದ್ಧಿ ಸರಕಾರದ ಧ್ಯೇಯವಾಗಿದ್ದು ಮುಂದಿನ ದಿನಗಳಲ್ಲಿ ಗ್ರಾಮ ಗ್ರಾಮಗಳಲ್ಲಿ ಮತ್ತಷ್ಟು ಅಭಿವೃದ್ಧಿಗೆ ಪ್ರಯತ್ನಿಲಾಗುವುದು ಎಂದರು.
ಈ ಸಂದರ್ಭ ತಂಕ ಮಿಜಾರು ಗ್ರಾಮ ಪಂಚಾಯತ್ ಅಧ್ಯಕ್ಷರು ಹಾಗೂ ಸದಸ್ಯರು, ಬಿಜೆಪಿ ಪಕ್ಷದ ಮುಖಂಡರು ಉಪಸ್ಥಿತರಿದ್ದರು.
Kshetra Samachara
05/02/2022 04:54 pm