ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಟೀಲು: ಕೊಂಡೇಲ್ತಾಯ ದೈವಸ್ಥಾನ ವಾರ್ಷಿಕ ಉತ್ಸವ; ಸಾಧಕರಿಗೆ ಗೌರವ; ವಿದ್ಯಾರ್ಥಿವೇತನ ವಿತರಣೆ

ಮುಲ್ಕಿ: ಉತ್ಸವ ,ಧಾರ್ಮಿಕ ಕಾರ್ಯಕ್ರಮಗಳು ನಮ್ಮ ಸನಾತನ ಸಂಸ್ಕೃತಿಯ ಪ್ರತೀಕವಾಗಿದ್ದು ಹಿಂದಿನಿಂದ ಇವರೆಗೆ ನಮ್ಮ ಹಿರಿಯರು ಹಾಕಿಕೊಟ್ಟ ಮೂಲ ನಂಬಿಕೆಯಲ್ಲಿ ನಡೆಯುತ್ತಿದೆ ಎಂದು ಶ್ರೀ ಕ್ಷೇತ್ರ ಕಟೀಲಿನ ಅರ್ಚಕ ಹರಿನಾರಾಯಣದಾಸ ಆಸ್ರಣ್ಣ ಹೇಳಿದರು .

ಕಟೀಲು ಕೊಂಡೇಲ ಶ್ರೀ ಕೊಂಡೆಲ್ತಾಯ ದೈವಸ್ಥಾನದಲ್ಲಿ ಜರಗಿದ ವಾರ್ಷಿಕ ಉತ್ಸವದ ಧಾರ್ಮಿಕ ಕಾರ್ಯಕ್ರಮದಲ್ಲಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಕರ್ಗಿ ಪೂಜಾರ್ತಿ ಸ್ಮರಣಾರ್ಥ ವಿದ್ಯಾರ್ಥಿವೇತನ ನೀಡಲಾಯಿತು. ಕಟೀಲು ಶಾಲೆಯ ನಿವೃತ್ತ ಶಿಕ್ಷಕ ಸತೀಶ್ ರಾವ್, ಹಿರಿಯ ಕೃಷಿಕ ಲೋಕಯ್ಯ ಶೆಟ್ಟಿ ರವರನ್ನು ಗೌರವಿಸಲಾಯಿತು.

ಕಟೀಲು ದೇವಳದ ಅರ್ಚಕ ವಾಸುದೇವ ಆಸ್ರಣ್ಣ, ಕೊಡೆತ್ತೂರು ಅರಸು ಕುಂಜಿರಾಯ ದೈವಸ್ಥಾನದ ಜಯರಾಮ ಮುಕಾಲ್ದಿ, ಕಸ್ತೂರಿ ಪಂಜ, ಈಶ್ವರ್ ಕಟೀಲ್, ಕಾಂಗ್ರೆಸ್ ಮುಖಂಡ ಮಿಥುನ್ ರೈ, ನಿಡ್ಡೋಡಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಭಾಸ್ಕರ ದೇವಸ್ಯ, ಧಾರ್ಮಿಕ ಪರಿಷತ್ ಸದಸ್ಯ ಭುವನಾಬಿರಾಮ ಉಡುಪ,ಎಕ್ಕಾರು ವಿಜಯ ಯುವ ಸಂಗಮದ ಗೌರವಾಧ್ಯಕ್ಷ ರತ್ನಾಕರ ಶೆಟ್ಟಿ ಎಕ್ಕಾರು, ಕೊಡೆತ್ತೂರು ಶ್ರೀ ಅgಸು ಕುಂಜಿರಾಯ ದೈವಸ್ಥಾನದ ಅಧ್ಯಕ್ಷ ದೇವಿಪ್ರಸಾದ್ ಶಟ್ಟಿ ಕೊಡೆತ್ತೂರು, ರಮಾನಂದ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು. ದೈವಸ್ಥಾನದ ಸಮಿತಿಯ ಅಧ್ಯಕ್ಷ ಲೋಕಯ್ಯ ಸಾಲಿಯಾನ್ ಸ್ವಾಗತಿಸಿದರು, ರಾಜೇಂದ್ರ ಪ್ರಸಾದ್ ಎಕ್ಕಾರು ಕಾರ್ಯಕ್ರಮ ನಿರೂಪಿಸಿದರು.

Edited By : PublicNext Desk
Kshetra Samachara

Kshetra Samachara

06/02/2022 04:39 pm

Cinque Terre

1.57 K

Cinque Terre

0

ಸಂಬಂಧಿತ ಸುದ್ದಿ