ಮುಲ್ಕಿ: ಹಳೆಯಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಹಳೆಯಂಗಡಿ, ಪಾವಂಜೆ ಸಸಿಹಿತ್ಲು ಗ್ರಾಮಗಳಿಗೆ ಸುಮಾರು ಎರಡು ಕೋಟಿ ವೆಚ್ಚದ ಜಲಜೀವನ್ ಮಿಷನ್ ಕುಡಿಯುವ ನೀರಿನ ನಳ್ಳಿ ನೀರಿನ ಯೋಜನೆಯನ್ನು ಶಾಸಕ ಉಮಾನಾಥ ಕೋಟ್ಯಾನ್ ಉದ್ಘಾಟಿಸಿದರು.
ಈ ಸಂದರ್ಭ ಅವರು ಮಾತನಾಡಿ ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಮುಖಾಂತರ ರಾಜ್ಯಕ್ಕೆ ಹಲವು ಯೋಜನೆಗಳು ಜಾರಿಯಾಗಿದ್ದು ಮುಂದಿನ ದಿನಗಳಲ್ಲಿ ಮತ್ತಷ್ಟು ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಾಗುವುದು ಎಂದರು.
ಈ ಸಂದರ್ಭ ಹಳೆಯಂಗಡಿ ಗ್ರಾಪಂ ಅಧ್ಯಕ್ಷೆ ಪೂರ್ಣಿಮಾ, ಉಪಾಧ್ಯಕ್ಷ ಅಶೋಕ್ ಬಂಗೇರ, ಸದಸ್ಯರಾದ ಸವಿತಾ ಯು ಸಾಲ್ಯಾನ್ ವಿನೋದ್ ಕುಮಾರ್ ಕೊಳುವೈಲು ಮಲ್ಲಿಕಾ ರಾಜೇಶ್ ಚಂದ್ರಿಕಾ ಪಿ ಕೋಟ್ಯಾನ್ , ಅಶ್ವಿನ್ ಪಾವಂಜೆ, ಜಯಂತಿ ಅರಂದು, ಸದಸ್ಯ ನಾಗರಾಜ್, ತಾ ಪಂ ಮಾಜೀ ಸದಸ್ಯ ಜೀವನ್ ಪ್ರಕಾಶ್ ಕಾಮೆರೊಟ್ಟು, ಇಂಜಿನಿಯರ್ ಪ್ರಶಾಂತ್ ಆಳ್ವ ಮತ್ತಿತರರು ಉಪಸ್ಥಿತರಿದ್ದರು.
Kshetra Samachara
06/02/2022 10:20 pm