ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸುರತ್ಕಲ್: ಬೂಟು ಪಾಲಿಶ್ ಮುಖಾಂತರ 11ನೇ ದಿನ ಟೋಲ್ ಗೇಟ್ ವಿರುದ್ಧ ಅಣಕು ಪ್ರತಿಭಟನೆ

ಸುರತ್ಕಲ್:ಕಳೆದ ಹತ್ತು ದಿನಗಳಿಂದ ನಡೆಯುತ್ತಿರುವ ಸುರತ್ಕಲ್ ಎನ್ಐಟಿಕೆ ಟೋಲ್ ಗೇಟ್ ವಿರುದ್ಧದ ಸಾಮಾಜಿಕ ಹೋರಾಟಗಾರ ಆಸಿಫ್ ಆಪದ್ಬಾಂಧವ ನೇತೃತ್ವದಲ್ಲಿ ಧರಣಿ ಗುರುವಾರವೂ ಮುಂದುವರಿದಿದೆ.

ಬೆಳಿಗ್ಗೆ ಜಿಲ್ಲಾಧಿಕಾರಿಗಳು ಹಾಗೂ ಹೋರಾಟಗಾರರ ಸಭೆಯಲ್ಲಿ, ಸುರತ್ಕಲ್ ಎನ್ಐಟಿಕೆ ಬಳಿ ಕಾರ್ಯಚರಿಸುತ್ತಿರುವ ಟೋಲ್ ಗೇಟ್' ದಾಖಲೆಗಳ ಆಧಾರದಲ್ಲಿ ಕೇಂದ್ರ ಸರ್ಕಾರದ ಅಧೀನದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ನಿರ್ದೇಶನದಂತೆ ಸಕ್ರಮವಾಗಿ ನಡೆಯುತ್ತಿದೆ ಆದ್ದರಿಂದ ನಿಮ್ಮ ಹೋರಾಟವನ್ನು ಕೈಬಿಡಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯವರು ಸ್ಪಷ್ಟಪಡಿಸಿದರು.

ಇದಕ್ಕೆ ಒಪ್ಪದ ಪ್ರತಿಭಟನಾಕಾರರು ಮೂಲಭೂತ ಸೌಕರ್ಯಗಳು ಇಲ್ಲದ ಟೋಲ್ಗೇಟ್ ಅಕ್ರಮ ಎಂದು ವಾದಿಸಿ ಮುಂದಿನ ದಿನಗಳಲ್ಲಿ ಮತ್ತಷ್ಟು ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.

ಪ್ರತಿಭಟನೆಯಲ್ಲಿ ಬೂಟು ಪಾಲೀಶ್ ಮಾಡುವ ಮುಖಾಂತರ ಅಧಿಕಾರಿಗಳು ಬಂಡವಾಳಶಾಹಿಗಳ ರಾಜಕಾರಣಿಗಳ ಕೈಗೊಂಬೆಯಾಗಿದ್ದಾರೆ ಎಂಬ ಸಂದೇಶವನ್ನು ಅಣಕು ಪ್ರದರ್ಶನ ನಡೆಯಿತು.

ಈ ಸಂದರ್ಭ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

17/02/2022 05:44 pm

Cinque Terre

1.46 K

Cinque Terre

0

ಸಂಬಂಧಿತ ಸುದ್ದಿ