ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮುಲ್ಕಿ: ಮುಲ್ಕಿಗೆ ಶೀಘ್ರ ಆಡಳಿತ ಸೌಧ: ಉಮಾನಾಥ್ ಕೋಟ್ಯಾನ್

ಮುಲ್ಕಿ: ಮುಲ್ಕಿ ತಾಲೂಕು ಅಭಿವೃದ್ಧಿಯತ್ತ ಸಾಗುತ್ತಿದ್ದು ನಗರ ಪಂಚಾಯತ್ ವ್ಯಾಪ್ತಿಯಲ್ಲಿ 1.30 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಲಾಗಿದೆ. ನಗರೋತ್ಥಾನ ಯೋಜನೆಯಲ್ಲಿ ಮುಲ್ಕಿಗೆ 5 ಕೋಟಿ ಬಿಡುಗಡೆಯಾಗಿದ್ದು ಶೀಘ್ರ ಕಾಮಗಾರಿ ನಡೆಸಲಾಗುವುದು ಎಂದು ಮುಲ್ಕಿ-ಮೂಡಬಿದ್ರೆ ಕ್ಷೇತ್ರದ ಶಾಸಕ ಉಮಾನಾಥ ಕೋಟ್ಯಾನ್ ಹೇಳಿದರು.

ಅವರು ಮುಲ್ಕಿ ನ ಪಂ ವ್ಯಾಪ್ತಿಯಲ್ಲಿ 2021 22 ನೇ ಸಾಲಿನ 15ನೇ ಹಣಕಾಸು, ಸ್ವಚ್ಛ ಭಾರತ್ ಮಿಷನ್ ಯೋಜನೆಯ ಅನುದಾನದ ಕಾಮಗಾರಿಗಳ ಶಿಲಾನ್ಯಾಸ ನೆರವೇರಿಸಿ ಮಾತನಾಡಿದರು.

ಅವರು ಮಾತನಾಡಿ ಮುಲ್ಕಿಯ ಕೆಎಸ್ ರಾವ್ ನಗರದ ಲಿಂಗಪ್ಪಯ್ಯಕಾಡಿನ ಕೊಳಚೆ ನಿರ್ಮೂಲನೆಗೆ 2 ಕೋಟಿ ಮಂಜೂರಾಗಿದ್ದು ಈಗಾಗಲೇ 50ಲಕ್ಷ ಬಿಡುಗಡೆಗೊಳಿಸಲಾಗಿದೆ. ಶೀಘ್ರ ಮುಲ್ಕಿಯಲ್ಲಿ ಆಡಳಿತ ಸೌಧ (ಮಿನಿ ವಿಧಾನಸೌಧ), 2 ಕೋಟಿ ವೆಚ್ಚದಲ್ಲಿ ನೂತನ ನಿರೀಕ್ಷಣಾ ಮಂದಿರ, ತಾಲೂಕ ಪಂಚಾಯತ್ ನೂತನ ಕಟ್ಟಡ ನಿರ್ಮಾಣಕ್ಕೆ ಚಾಲನೆ ನೀಡಲಾಗುವುದು.

ಮುಲ್ಕಿ ಸಮುದಾಯ ಆರೋಗ್ಯ ಕೇಂದ್ರದ ಎಂಆರ್ಪಿಎಲ್ ಅನುದಾನದ 1 ಕೋಟಿ ವೆಚ್ಚದ ನೂತನ ಕಟ್ಟಡ ಕಾಮಗಾರಿ ನಡೆಯುತ್ತಿದ್ದು ಶೀಘ್ರ ಲೋಕಾರ್ಪಣೆ ಗೊಳಿಸಲಾಗುವುದು ಎಂದರು.

ಈ ಸಂದರ್ಭ ಮುಲ್ಕಿ ನಪಂ ಅಧ್ಯಕ್ಷ ಸುಭಾಷ್ ಶೆಟ್ಟಿ, ಮಾಜಿ ಅಧ್ಯಕ್ಷ ಸುನಿಲ್ ಆಳ್ವ, ಮುಖ್ಯಾಧಿಕಾರಿ ಚಂದ್ರಪೂಜಾರಿ, ಸದಸ್ಯರಾದ ವಂದನ ಕಾಮತ್ ರಾಧಿಕಾ, ದಯಾವತಿ ಅಂಚನ್, ನರಸಿಂಹ ಪೂಜಾರಿ,ಮಾಜಿ ಸದಸ್ಯ ಉಮೇಶ್ ಮಾನಂಪಾಡಿ ಮತ್ತಿತರರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

28/02/2022 02:24 pm

Cinque Terre

1.21 K

Cinque Terre

0

ಸಂಬಂಧಿತ ಸುದ್ದಿ