ಮೂಡಬಿದ್ರೆ:ಪಾಲಡ್ಕ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಡಂದಲೆ ಗ್ರಾಮದ ಕೊಳಟಿಕಟ್ಟ ಎಂಬಲ್ಲಿ 1 ಕೋಟಿ 89 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಸೇತುವೆ ಸಹಿತ ಕಿಂಡಿ ಆಣೆಕಟ್ಟು ಕಾಮಗಾರಿಗೆ ಮುಲ್ಕಿ ಮೂಡುಬಿದಿರೆ ಶಾಸಕ ಉಮಾನಾಥ್ ಕೋಟ್ಯಾನ್ ಶಿಲಾನ್ಯಾಸ ನೆರವೇರಿಸಿದರು.
ಈ ಸಂದರ್ಭ ಅವರು ಮಾತನಾಡಿ ಮುಲ್ಕಿ-ಮೂಡಬಿದ್ರೆ ಕ್ಷೇತ್ರ ಅಭಿವೃದ್ಧಿ ಪಥದತ್ತ ಸಾಗುತ್ತಿದ್ದು ಮುಂದಿನ ದಿನಗಳಲ್ಲಿ ಮತ್ತಷ್ಟು ಅಭಿವೃದ್ಧಿಗೆ ಚಾಲನೆ ನೀಡಲಾಗುವುದು ಎಂದರು.
ಈ ಸಂದರ್ಭ ಸ್ಥಳೀಯ ಪಂಚಾಯತ್ ಅಧ್ಯಕ್ಷರು, ಸದಸ್ಯರು, ಅಭಿವೃದ್ಧಿ ಅಧಿಕಾರಿ ಮತ್ತಿತರರು ಉಪಸ್ಥಿತರಿದ್ದರು.
Kshetra Samachara
02/03/2022 05:47 pm