ಸುರತ್ಕಲ್: ಮಂಗಳೂರು ನಗರ ಉತ್ತರ ಕ್ಷೇತ್ರದ ಪಾಲಿಕೆ ವ್ಯಾಪ್ತಿಯ ಸುರತ್ಕಲ್ ನ ಇಡ್ಯಾ ಪೂರ್ವ 6 ನೇ ವಾರ್ಡಿನ ಹಿಂದೂ ರುದ್ರಭೂಮಿಯಲ್ಲಿ ಸುಮಾರು 2ಕೋಟಿ 5 ಲಕ್ಷ ವೆಚ್ಚದಲ್ಲಿ ವಿದ್ಯುತ್ ಚಿತಾಗಾರ ಮತ್ತು ಅಭಿವೃದ್ಧಿ ಕಾಮಗಾರಿಗೆ ಶಾಸಕ ಡಾ.ವೈ ಭರತ್ ಶೆಟ್ಟಿಯವರು ಗುದ್ದಲಿಪೂಜೆ ನೆರವೇರಿಸಿದರು.
ಶಾಸಕರೊಂದಿಗೆ ಮೇಯರ್ ಪ್ರೇಮಾನಂದ ಶೆಟ್ಟಿ, ಉಪಮೇಯರ್ ಸುಮಂಗಳಾ, ಸ್ಥಳೀಯ ಕಾರ್ಪೋರೇಟರ್ ಸರಿತಾ ಶಶಿಧರ್, ಮನಪಾ ಸದಸ್ಯರು, ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.
Kshetra Samachara
06/03/2022 11:07 am