ಮುಲ್ಕಿ: ಹಳೆಯಂಗಡಿ ಸಮೀಪದ ತೋಕೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಸಮಗ್ರ ಜೀರ್ಣೋದ್ದಾರ ಪೂರ್ವಭಾವಿಯಾಗಿ ದೇವಸ್ಥಾನದ ಹೊರಾಂಗಣ ನಾಗದೇವರ ಗುಡಿಯ ಬಲಭಾಗದಲ್ಲಿ ಶ್ರೀದೇವರ ಬಾಲಾಲಯ ಪ್ರತಿಷ್ಠೆಯ ಸ್ಥಳವನ್ನು ಪಕ್ಷಿ ಕೆರೆಯ ಶ್ರೀ ವಿನಾಯಕ ಮಿತ್ರ ಮಂಡಳಿ (ರಿ) ಸದಸ್ಯರು ಶ್ರಮದಾನ ಮಾಡಿದರು.
ಈ ಸಂದರ್ಭ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಹರಿದಾಸ್ ಭಟ್ ಮಾತನಾಡಿ ಸ್ವಚ್ಛತೆಯ ಮೂಲಕ ದೇವಸ್ಥಾನದ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಲಾಗುತ್ತಿದ್ದು ದೇವಸ್ಥಾನದ ಜೀರ್ಣೋದ್ಧಾರಕ್ಕೆ ಎಲ್ಲರೂ ಕೈಜೋಡಿಸಲು ಮನವಿ ಮಾಡಿದರು.
ವ್ಯವಸ್ಥಾಪನಾ ಸಮಿತಿಯ ಸದಸ್ಯರು, ಜೀರ್ಣೋದ್ಧಾರ ಸಮಿತಿಯ ಉಪಾಧ್ಯಕ್ಷ ಮೋಹನ್ ದಾಸ್, ದೇವಾಲಯದ ಸಿಬ್ಬಂದಿ ವರ್ಗ ಗ್ರಾಮಸ್ಥರು ಉಪಸ್ಥಿತರಿದ್ದರು.
Kshetra Samachara
19/03/2022 07:09 am