ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮುಲ್ಕಿ: 'ಮಹಿಳೆಯರು ಸಂಘಟಿತರಾದರೆ ದೇಶದ ಅಭಿವೃದ್ಧಿ ಸಾಧ್ಯ'

ಮುಲ್ಕಿ: ಯುವವಾಹಿನಿ ಮುಲ್ಕಿ ಘಟಕದ ಆಶ್ರಯದಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ 'ಮಹಿಳಾ ಸಂಭ್ರಮ-2022' ಮುಲ್ಕಿ ಬಿಲ್ಲವ ಸಮಾಜ ಸೇವಾ ಸಂಘದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವ ವಾಹಿನಿ ಮುಲ್ಕಿ ಘಟಕದ ಅಧ್ಯಕ್ಷ ಭರತೇಶ್ ಅಮೀನ್ ಮಟ್ಟು ವಹಿಸಿದ್ದರು. ಕೊಲ್ಲೂರು ಸರ್ಕಾರಿ ಆಯುಷ್ ಆರೋಗ್ಯ ಮತ್ತು ಕ್ಷೇಮ ಕೇಂದ್ರದ ವ್ಯೆದ್ಯಾಧಿಕಾರಿ ಡಾ. ಶೋಭಾ ರಾಣಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿ ಮಹಿಳೆಯರು ಆರೋಗ್ಯವನ್ನು ಕಾಪಾಡಿಕೊಳ್ಳುವ ಜೊತೆಗೆ ಸಂಘಟನೆಯಲ್ಲಿ ತೊಡಗಿಸಿಕೊಳ್ಳಬೇಕು. ಮಹಿಳೆಯರು ಸಂಘಟಿತರಾದರೆ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ ಎಂದರು.

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಯುವ ವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಉದಯ ಅಮೀನ್ ಮಟ್ಟು,ಮುಲ್ಕಿ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ರಮೇಶ್ ಅಮೀನ್ ಕೊಕ್ಕರ್ ಕಲ್,ಯುವವಾಹಿನಿ ಕೇಂದ್ರ ಸಮಿತಿಯ ಮಹಿಳಾ ಸಂಘಟನಾ ನಿರ್ದೇಶಕಿ ಸುಮಾ ವಸಂತ್ ಕಂಕನಾಡಿ, ಕಾರ್ಯದರ್ಶಿ ಚರಿಷ್ಮಾ ಶ್ರೀನಿವಾಸ್, ಕೋಶಾಧಿಕಾರಿ ಜ್ಯೋತಿ ರಾಮಚಂದ್ರ ಕೋಟ್ಯಾನ್, ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಹಿರಿಯ ಪಾಡ್ಡನ ಕಲಾವಿದೆ ಚಂದು ಪೂಜಾರ್ತಿ ಕುಬೆವೂರು ರವರನ್ನು ಗೌರವಿಸಲಾಯಿತು. ರಾಜೇಶ್ವರಿ,ಜಾಹ್ನವಿ ಸುವರ್ಣ ಕಾರ್ಯಕ್ರಮ ನಿರೂಪಿಸಿದರು. ಬಳಿಕ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

Edited By : PublicNext Desk
Kshetra Samachara

Kshetra Samachara

19/03/2022 07:40 pm

Cinque Terre

2.23 K

Cinque Terre

0

ಸಂಬಂಧಿತ ಸುದ್ದಿ