ಮುಲ್ಕಿ: ಮುಲ್ಕಿ ಸೀಮೆಯ ಒಂಬತ್ತು ಮಾಗಣೆಯ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಜಾತ್ರಾ ಮಹೋತ್ಸವದ ಅಂಗವಾಗಿ ಪಲ್ಲ ಪೂಜೆ ವಿಜೃಂಭಣೆಯಿಂದ ನಡೆಯಿತು.
ಸುಮಾರು 5 ಸಾವಿರಕ್ಕೂ ಮಿಕ್ಕಿ ಭಕ್ತರು ಅನ್ನಸಂತರ್ಪಣೆಯಲ್ಲಿ ಭಾಗಿಯಾದರು.
ಈ ಸಂದರ್ಭ ದೇವಸ್ಥಾನದ ಅರ್ಚಕರಾದ ಶ್ರೀಪತಿ ಉಪಾಧ್ಯಾಯ, ಅನುವಂಶಿಕ ಮೊಕ್ತೇಸರ ದುಗ್ಗಣ್ಣ ಸಾವಂತರು, ಧರ್ಮದರ್ಶಿ ಹರಿಕೃಷ್ಣ ಪುನರೂರು, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ನಾರಾಯಣ ಶೆಟ್ಟಿ, ಕಾರ್ಯಧ್ಯಕ್ಷ ಶೇಖರ್ ಶೆಟ್ಟಿ , ಬಿಲ್ಲವ ಸಂಘದ ಅಧ್ಯಕ್ಷ ರಮೇಶ ಅಮೀನ್, ಗುರುವಪ್ಪ ಕೋಟ್ಯಾನ್, ಡಾ. ಹರಿಶ್ಚಂದ್ರ ಪಿ ಸಾಲ್ಯಾನ್, ಶ್ರೀಪತಿ ಭಟ್ ಪರೆಂಕಿಲ,ಮಹಿಮ್ ಹೆಗ್ಡೆ ಮತ್ತಿತರರು ಉಪಸ್ಥಿತರಿದ್ದರು.
Kshetra Samachara
23/03/2022 03:11 pm