ಮುಲ್ಕಿ:ಬಳ್ಕುಂಜೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಿಲಾನ್ಯಾಸವನ್ನು ಶಾಸಕ ಉಮಾನಾಥ್ ಕೋಟ್ಯಾನ್ ನೆರವೇರಿಸಿದರು.
ಈ ಸಂದರ್ಭ ಅವರು ಮಾತನಾಡಿ ಗ್ರಾಮದ ಅಭಿವೃದ್ಧಿ ಸರಕಾರದ ಧ್ಯೇಯವಾಗಿದ್ದು ಜನರಿಗೆ ಮೂಲಭೂತ ಸೌಕರ್ಯಗಳ ಒದಗಿಸುವ ಮೂಲಕ ಆಡಳಿತವನ್ನು ಮತ್ತಷ್ಟು ಚುರುಕುಗೊಳಿಸಲಾಗುವುದು ಎಂದರು.
ಬಳ್ಕುಂಜೆ ಗ್ರಾಮ ಪಂಚಾಯತ್ ನಲ್ಲಿ ನೂತನ ಡಿಜಿಟಲ್ ಗ್ರಂಥಾಲಯ ಉದ್ಘಾಟನೆ,ಕವತ್ತಾರು ಗ್ರಾಮದ ಜೋಗಿದೊಟ್ಟು ಎಂಬಲ್ಲಿ 81 ಲಕ್ಷ ರೂಪಾಯಿ ವೆಚ್ಚದಲ್ಲಿ ಕಿಂಡಿ ಆಣೆಕಟ್ಟು ನಿರ್ಮಾಣ ಕಾಮಗಾರಿಗೆ ಶಿಲಾನ್ಯಾಸ. ಕವತ್ತಾರು ಬಾರೆಮಾರು ಬಳಿ 5 ಲಕ್ಷ ರೂಪಾಯಿ ವೆಚ್ಚದಲ್ಲಿ ಕಾಲುಸಂಕ ನಿರ್ಮಾಣ ಕಾಮಗಾರಿಗೆ ಶಿಲಾನ್ಯಾಸ ಕಾರ್ಯಕ್ರಮ ನಡೆಯಿತು.
ಈ ಸಂದರ್ಭ ಬಳ್ಕುಂಜೆ ಗ್ರಾಪಂ ಅಧ್ಯಕ್ಷೆ ಮಮತಾ ಡಿ. ಪೂಂಜ,ಮಾಜಿ ಅಧ್ಯಕ್ಷ ದಿನೇಶ್ ಪುತ್ರನ್, ಸದಸ್ಯ ಆನಂದ ಕೊಲ್ಲೂರು, ನವೀನ್ ಶೆಟ್ಟಿ, ಗೀತಾ, ಸುಜಾತ , ನವೀನ್ ಕೋಟ್ಯಾನ್, ವನಜಾ, ಪ್ರಶಾಂತ, ಮರಿನಾ, ಶಾಂತ, ಮಂಡಲಾಧ್ಯಕ್ಷ ಸುನಿಲ್ ಆಳ್ವ ಮತ್ತಿತರರು ಉಪಸ್ಥಿತರಿದ್ದರು. ಅಭಿವೃದ್ಧಿ ಅಧಿಕಾರಿ ಪ್ರಕಾಶ್ ನಿರೂಪಿಸಿದರು.
Kshetra Samachara
31/03/2022 05:29 pm