ಮುಲ್ಕಿ: ಮುಲ್ಕಿ ನಗರ ಪಂಚಾಯತ್ ವ್ಯಾಪ್ತಿಯ ಗೇರುಕಟ್ಟೆ ಬಳಿ ಮುಲ್ಕಿ ತಾಲೂಕು ಕಚೇರಿಗೆ ಮೀಸಲಾಗಿಟ್ಟ ಎಕರೆಗಟ್ಟಲೆ ಗುಡ್ಡೆ ಜಾಗದಲ್ಲಿ ಶುಕ್ರವಾರ ಸಂಜೆ ವೇಳೆಗೆ ಆಕಸ್ಮಿಕ ಬೆಂಕಿ ತಗಲಿ ಆತಂಕ ಮಯ ವಾತಾವರಣ ಸೃಷ್ಟಿಯಾಯಿತು.
ಬೆಂಕಿ ಧಗಧಗನೆ ಹೊತ್ತಿ ಉರಿಯುತ್ತಿದ್ದಂತೆ ಕೂಡಲೇ ಸ್ಥಳೀಯರಾದ ಕೇಬಲ್ ಮಾಲಕ ಬಾಲಕೃಷ್ಣ ನೇತೃತ್ವದಲ್ಲಿ ಆದಷ್ಟು ಬೆಂಕಿಯನ್ನು ನಂದಿಸಲು ಪ್ರಯತ್ನಪಟ್ಟಿದ್ದಾರೆ.
ಕಳೆದ ಕೆಲವು ತಿಂಗಳ ಹಿಂದೆ ಇದೇ ಪರಿಸರದಲ್ಲಿ ವಿದ್ಯುತ್ ಆಕಸ್ಮಿಕದಿಂದ ಗುಡ್ಡೆಗೆ ಬೆಂಕಿ ತಗಲಿ ಹೊತ್ತಿ ಉರಿದು ಆತಂಕ ಸೃಷ್ಟಿಯಾಗಿ ಸ್ಥಳೀಯರು ಬೆಂಕಿ ನಂದಿಸಿದ್ದರು
Kshetra Samachara
01/04/2022 07:31 pm