ಮೂಡಬಿದ್ರೆ:ಲೋಕೋಪಯೋಗಿ ಇಲಾಖೆಯ ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯಡಿ ಕೆಂಪ್ಲಾಜೆ ದೇವಸ್ಥಾನದ ಬಳಿಯಿಂದ ಪುಚ್ಚಮೊಗರು ಸೇತುವೆವರೆಗೆ 7 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಉಮಾನಾಥ್ ಕೋಟ್ಯಾನ್ ಶಿಲಾನ್ಯಾಸ ನೆರವೇರಿಸಿದರು.
ಈ ಸಂದರ್ಭ ಸ್ಥಳೀಯ ಪಂಚಾಯತ್ ಸದಸ್ಯರು ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು
Kshetra Samachara
10/04/2022 12:17 pm