ಮುಲ್ಕಿ: ಅತಿಕಾರಿಬೆಟ್ಟು ಗ್ರಾಮ ಪಂಚಾಯಿತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿಯ ಮಾ. 15 ರಿಂದ ಮಾ. 31ವರೆಗೆ "ದುಡಿಯೋಣ ಬಾ" ಅಭಿಯಾನದಲ್ಲಿ ಸಾರ್ವಜನಿಕ ಕಾಮಗಾರಿ ಕಕ್ವ ವಿಠಲ ಶೇರಿಗಾರ ಮನೆ ಬಳಿ ಪರಂಬೋಕು ತೋಡಿನ ಹೂಳೆತ್ತುವ ಕಾಮಗಾರಿಗೆ ಅತಿಕಾರಿಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷ ಮನೋಹರ ಕೋಟ್ಯಾನ್ ಕಾಮಗಾರಿಗೆ ಚಾಲನೆ ನೀಡಿದರು.
ಈ ಸಂದರ್ಭ ಅವರು ಮಾತನಾಡಿ ನರೇಗಾ ಯೋಜನೆಗೆ ಗ್ರಾಮಸ್ಥರು ಹೆಚ್ಚಿನ ಪ್ರೋತ್ಸಾಹ ನೀಡಿ ಗ್ರಾಮದ ಅಭಿವೃದ್ಧಿಗೆ ಸಹಕರಿಸಲು ಮನವಿ ಮಾಡಿದರು.
ಈ ಸಂದರ್ಭ ಪಂಚಾಯತ್ ದ್ವಿತೀಯ ದರ್ಜೆ ಲೆಕ್ಕ ಸಹಾಯಕರಾದ ಯೋಗೀಶ್, ಪಂಚಾಯತ್ ಸದಸ್ಯ ಸುಧಾಕರ ಶೆಟ್ಟಿ, ಜಯಕುಮಾರ್, ಜ್ಯೋತಿ ಆಚಾರ್ಯ, ಗೀತಾ, ಪಂಚಾಯತ್ ಸಿಬ್ಬಂದಿಗಳು, ಸ್ವಸಹಾಯ ಸಂಘದ ಸದಸ್ಯರು ಹಾಗೂ ಉದ್ಯೋಗ ಚೀಟಿದಾರರು ಉಪಸ್ಥಿತರಿದ್ದರು.
Kshetra Samachara
13/04/2022 07:17 pm