ಮುಲ್ಕಿ:: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ (ರಿ.) ಬಜಪೆ ಮತ್ತು ಕರ್ನಾಟಕ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಯ ಸಂಯುಕ್ತ ಆಶ್ರಯದಲ್ಲಿ ಕಿನ್ನಿಗೋಳಿಯ ಯುಗಪುರುಷ ಸಭಾಭವನದಲ್ಲಿ ನೋಂದಾಯಿತ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವಲಂಬಿತರಿಗೆ ಮತ್ತು ಇತರ ಎಲ್ಲಾ ಕಾರ್ಮಿಕ ಬಂಧುಗಳಿಗೆ ಆರೋಗ್ಯ ತಪಾಸಣಾ ಶಿಬಿರ ಮತ್ತು ಕಿಟ್ ವಿತರಣೆಯ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮವನ್ನು ಕಿನ್ನಿಗೋಳಿಯ ಯುಗಪುರುಷ ಪ್ರಧಾನ ಸಂಪಾದ ಭುವನಾಭಿರಾಮ ಉಡುಪ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ವೈ. ಯೋಗೀಶ ರಾವ್‌ರವರು ವಹಿಸಿದ್ದರು. ಆರೋಗ್ಯ ತಪಾಸಣಾ ಶಿಬಿರವನ್ನು ಬಂಟ್ಸ್ ಹಾಸ್ಟೆಲ್ ಇಂಡ್ಸ್ ಲ್ಯಾಬ್‌ನ ವೈದ್ಯಾಧಿಕಾರಿ ಡಾ| ಹರ್ಷರವರು ನಡೆಸಿಕೊಟ್ಟರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಿನ್ನಿಗೋಳಿ ವಲಯದ ಮೇಲ್ವಿಚಾರಕ ನವೀನ್, ಏಳಿಂಜೆ ಒಕ್ಕೂಟದ ಅಧ್ಯಕ್ಷೆ ಪದ್ಮಿನಿ ವಸಂತ್, ಐಕಳ ಒಕ್ಕೂಟದ ಅಧ್ಯಕ್ಷ ವಸಂತ ಅಮೀನ್ ಉಪಸ್ಥಿತರಿದ್ದರು. ಸೇವಾ ಪ್ರತಿನಿಧಿ ಶ್ರೀಕಲಾ ಸ್ವಾಗತಿಸಿದರು, ಸುಮ ವಂದಿಸಿದರು, ಲೀಲಾ ಪ್ರಸನ್ನ ಕಾರ್ಯಕ್ರಮ ನಿರೂಪಿಸಿದರು.
Kshetra Samachara
20/04/2022 05:04 pm