ಮಂಗಳೂರು: ನಗರದ ಅಕಾಶಭವನ ತ್ರಿವರ್ಣ ಫ್ರೆಂಡ್ಸ್ ಕ್ಲಬ್ ಎದುರಿನ ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ವಿಶ್ವಸ್ಥ ಮಂಡಳಿಯ ವೇದಿಕೆಯಲ್ಲಿ ಕರ್ನಾಟಕ ಸರ್ಕಾರ ಕಾರ್ಮಿಕ ಇಲಾಖೆ ಮತ್ತು ಕರ್ನಾಟಕ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಮತ್ತು ಬಿಜೆಪಿ ಕಾವೂರು ಮತ್ತು ಅಕಾಶಭವನ ಶಕ್ತಿ ಕೇಂದ್ರದ ಸಹಭಾಗಿತ್ವದಲ್ಲಿ ವಾರ್ಡ್ 18 ವ್ಯಾಪ್ತಿಯ ನೋಂದಾಯಿತ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವರ ಅವಲಂಬಿತರಿಗಾಗಿ ನಡೆಯುವ ಶಿಬಿರವನ್ನು ಶಾಸಕ ಡಾ. ವೈ.ಭರತ್ ಶೆಟ್ಟಿ ದೀಪ ಪ್ರಜ್ವಲನೆ ಮಾಡಿ ಚಾಲನೆ ನೀಡಿದರು.
ಮ.ನ.ಪಾ ಸದಸ್ಯೆ ಗಾಯತ್ರಿ ಎ ರಾವ್, ವಾರ್ಡ್ ಬಿಜೆಪಿ ಪ್ರಮುಖರು, ತ್ರಿವರ್ಣ ಫ್ರೆಂಡ್ಸ್ ನ ಪ್ರಮುಖರು, ಗಣೇಶೋತ್ಸವ ಸಮಿತಿಯ ಪ್ರಮುಖರು, ಕಾರ್ಮಿಕ ಇಲಾಖೆಯ ಸಿಬ್ಬಂದಿಗಳು, ಸಾರ್ವಜನಿಕರು ಮತ್ತು ಸ್ಥಳೀಯ ನಿವಾಸಿಗಳು, ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.
Kshetra Samachara
25/04/2022 02:20 pm