ಮುಲ್ಕಿ:ಮುಲ್ಕಿ ಸಮೀಪದ ಅತಿಕಾರಿಬೆಟ್ಟು ಗ್ರಾಮ ಪಂಚಾಯತ್ ಸಭಾಭವನದಲ್ಲಿ ಶಿಕ್ಷಣ ಸಚಿವಾಲಯ, ಭಾರತ ಸರಕಾರ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ನವದೆಹಲಿ, ಮಂಗಳೂರು ಎ.ಜೆ.ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್, ಮಂಗಳೂರು, ಅತಿಕಾರಿಬೆಟ್ಟು ಮತ್ತು ಬಳ್ಕುಂಜೆ ಗ್ರಾಮ ಪಂಚಾಯತ್ ಜಂಟಿ ಕಾರ್ಯಕ್ರಮ ಅತಿಕಾರಿಬೆಟ್ಟು, ಶಿಮಂತೂರು, ಕವತ್ತಾರ್, ಕೊಲ್ಲೂರು ಮತ್ತು ಕರ್ನಿರೆ ಗ್ರಾಮಗಳಲ್ಲಿ ಉನ್ನತ ಭಾರತ ಅಭಿಯಾನದ ಆರಂಭೋತ್ಸವನ್ನು ಶಾಸಕ ಉಮಾನಾಥ ಕೋಟ್ಯಾನ್ ದೀಪ ಬೆಳಗಿಸಿ ಉದ್ಘಾಟಿಸಿದರು.
ಈ ಸಂದರ್ಭ ಅವರು ಮಾತನಾಡಿ ಗ್ರಾಮಗಳಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿಯಿಂದ ದೇಶದ ಅಭಿವೃದ್ಧಿ ಸಾಧ್ಯ ಎಂದರು.
ಈ ಸಂದರ್ಭದಲ್ಲಿ ಮಂಗಳೂರು ಎ.ಜೆ.ಗ್ರೂಪ್ ಆಫ್ ಇನ್ಸ್ಟಿಟ್ಯೂಶನ್ಸ್ ನ ಡಾ.ಎ.ಜೆ.ಶೆಟ್ಟಿ, ಉಪಾಧ್ಯಕ್ಷ ಪ್ರಶಾಂತ್ ಶೆಟ್ಟಿ, ಡಾ| ಟಿ. ಜಯಪ್ರಕಾಶ್ ರಾವ್, ಅತಿಕಾರಿಬೆಟ್ಟು ಗ್ರಾಪಂ ಅಧ್ಯಕ್ಷ ಮನೋಹರ ಕೋಟ್ಯಾನ್, ಬಳ್ಕುಂಜೆ ಗ್ರಾ ಪಂ ಅಧ್ಯಕ್ಷೆ ಮಮತಾ ಡಿ ಪೂಂಜ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಬಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಸಿಬ್ಬಂದಿ ವರ್ಗ ಹಾಗೂ ಸರ್ವ ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
Kshetra Samachara
30/04/2022 02:32 pm