ಮುಲ್ಕಿ: ಅತಿಕಾರಿಬೆಟ್ಟು ಗ್ರಾಮಪಂಚಾಯತ್ ವ್ಯಾಪ್ತಿಯ ಮೈಲೊಟ್ಟು ಅಂಗನವಾಡಿ ಕೇಂದ್ರದಲ್ಲಿ ಕೇಂದ್ರ ಸರಕಾರದ ಕಾರ್ಯಕ್ರಮ ಪೋಷಣೆ ಅಭಿಯಾನದಡಿಯಲ್ಲಿ ರಕ್ತಹೀನತೆಯ ಬಗ್ಗೆ ಪೋಷಕರಿಗೆ ಮಾಹಿತಿ ನೀಡಲಾಯಿತು ಹಾಗೂ 9 ತಿಂಗಳಿನಿಂದ 5 ವರ್ಷದವರೆಗಿನ ಮಕ್ಕಳಿಗೆ ವಿಟಮಿನ್ ಎ ದ್ರಾವಣವನ್ನು ನೀಡಲಾಯಿತು.
ಈ ಸಂದರ್ಭ ಅತಿಕಾರಿಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷ ಮನೋಹರ ಕೋಟ್ಯಾನ್ ಮಾತನಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸ್ವಚ್ಛತೆ ಹಾಗೂ ಆರೋಗ್ಯಕ್ಕೆ ಗ್ರಾಮಸ್ಥರು ಹೆಚ್ಚಿನ ಒತ್ತು ನೀಡಬೇಕು ಎಂದು ಮನವಿ ಮಾಡಿದರು.
ಆರೋಗ್ಯ ಸಹಾಯಕಿ ನಾಗವೇಣಿ, ಸಮುದಾಯ ಆರೋಗ್ಯ ಅಧಿಕಾರಿ ವಿಲ್ಮಾ,,ಆಶಾಕಾರ್ಯಕರ್ತೆಯರಾದ ನಳಿನಿ ಮತ್ತು ಆಶಾಲತಾ, ಅಂಗನವಾಡಿ ಕಾರ್ಯಕರ್ತೆ ಹಾಗೂ ಮಮತ, ಸಹಾಯಕಿ ಶಾಂತಿ, ಶಾಲಾ ಮುಖ್ಯೋಪಾದ್ಯಾಯಿನಿ ಹೇಮಲತಾ ಉಪಸ್ಥಿತರಿದ್ದರು.
Kshetra Samachara
17/06/2022 03:27 pm