ಮಂಗಳೂರು: ನಗರದ ಹೊರವಲಯದ ತಿರುವೈಲ್ ವಾರ್ಡಿನ ಅಂಬೇಡ್ಕರ್ ನಗರದ ಸಮಗ್ರ ಅಭಿವೃದ್ಧಿಗೆ 1 ಕೋಟಿ ರೂಪಾಯಿ ವೆಚ್ಚದಲ್ಲಿ ರಸ್ತೆಗಳು, ಫುಟ್ ಪಾತ್, ಚರಂಡಿ, ಬೀದಿದೀಪ ವ್ಯವಸ್ಥೆ ಆಗಲಿದೆ.
ಈಗಾಗಲೇ ಕೆಲವು ಕಾಮಗಾರಿಗಳು ಪ್ರಗತಿಯಲ್ಲಿದ್ದು, ಶೀಘ್ರದಲ್ಲಿ ಅಂದಾಜು ಒಂದೂವರೆ ಕೋಟಿ ರೂಪಾಯಿಗೂ ಮಿಕ್ಕಿ ಅನುದಾನದಲ್ಲಿ ಇನ್ನಿತರ ಕಾಮಗಾರಿಗಳು ಆರಂಭಗೊಳ್ಳಲಿದೆ ಎಂದು ಶಾಸಕರಾದ ಡಾ.ಭರತ್ ಶೆಟ್ಟಿ ಹೇಳಿದ್ದಾರೆ. ಅವರು 20 ನೇ ತಿರುವೈಲ್ ವಾರ್ಡಿನ ಅಂಬೇಡ್ಕರ್ ನಗರದಲ್ಲಿ 100 ಲಕ್ಷ ರೂ ವೆಚ್ಚದಲ್ಲಿ ನಡೆಯಲಿರುವ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು.
ಸ್ಥಳೀಯ ಕಾರ್ಪೋರೇಟರ್ ಹೇಮಲತಾ ರಘು ಸಾಲಿಯಾನ್, ಭಾಜಪಾ ಉತ್ತರ ಮಂಡಲ ಪ್ರಧಾನ ಕಾರ್ಯದರ್ಶಿ ರಾಜೇಶ್ ಕೊಟ್ಟಾರಿ, ಎಸ್ ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಅಶೋಕ್ ಸಹಿತ ಗಣ್ಯರು, ಪ್ರಮುಖರು, ಕಾರ್ಯಕರ್ತರು, ಸಾರ್ವಜನಿಕರು ಉಪಸ್ಥಿತರಿದ್ದರು.
Kshetra Samachara
19/06/2022 01:16 pm